ಬ್ರೇಕಿಂಗ್ ನ್ಯೂಸ್
14-09-25 06:01 pm HK News Desk ಕ್ರೈಂ
ಅಹ್ಮದಾಬಾದ್, ಸೆ.13 : 2007ರಲ್ಲಿ ಸೂರತ್ ನಲ್ಲಿ ನಡೆದಿದ್ದ ದರೋಡೆ ಮತ್ತು ಬರ್ಬರ ಕೊಲೆ ಪ್ರಕರಣದಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಗುಜರಾತ್ ಪೊಲೀಸರು ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿ ಬಂಧಿಸಲು ಯಶಸ್ವಿಯಾಗಿದ್ದಾರೆ.
ನರೇಶ್ ಕೇಸ್ರಿಮಲ್ಜಿ ರಾವಲ್ ಬಂಧಿತ ಆರೋಪಿಯಾಗಿದ್ದು ನಕಲಿ ಗುರುತಿನ ದಾಖಲೆಗಳೊಂದಿಗೆ ಕರ್ನಾಟಕದ ವಿವಿಧ ಕಡೆಗಳಲ್ಲಿ ವಾಸಿಸುತ್ತಿದ್ದ. ರಾವಲ್ ಪತ್ತೆಗಾಗಿ ಸ್ಪೆಷಲ್ ಆಪರೇಶನ್ ಗ್ರೂಪ್ ಕಾರ್ಯಾಚರಣೆ ನಡೆಸಿತ್ತು. ಆರೋಪಿ ರಾವಲ್ ಬಗ್ಗೆ ಮಾಹಿತಿ ನೀಡುವವರಿಗೆ 45,000 ರು. ಬಹುಮಾನ ಘೋಷಿಸಲಾಗಿತ್ತು. 19 ವರ್ಷಗಳ ಬಳಿಕ ಪೊಲೀಸರು ಮಾರುವೇಷದಲ್ಲಿ ಬಂದು ರಾವಲ್ ನನ್ನು ಸೆರೆಹಿಡಿದಿದ್ದಾರೆ.
ಸೂರತ್ ನಗರದ ಉಮ್ರಾ ಎಂಬಲ್ಲಿ 2007 ರಲ್ಲಿ ವೃದ್ಧ ದಂಪತಿಯಿದ್ದ ಕುಟುಂಬಕ್ಕೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ವೇಳೆ, ರಾವಲ್ ತನ್ನ ಮೂವರು ಸಹಚರರೊಂದಿಗೆ ಸೇರಿಕೊಂಡು ವೃದ್ಧ ದಂಪತಿಯನ್ನು ಕಟ್ಟಿ ಹಾಕಿ, ದರೋಡೆ ನಡೆಸಿದ್ದರು. ಈ ವೇಳೆ, ಕೃತ್ಯಕ್ಕೆ ಅಡ್ಡಬಂದಿದ್ದ ಮನೆಯ ಸೆಕ್ಯುರಿಟಿ ಗಾರ್ಡ್‌ನನ್ನು ಹತ್ಯೆಗೈದು ಪರಾರಿಯಾಗಿದ್ದರು. ದರೋಡೆ ಕೃತ್ಯಕ್ಕೆ ಸಹಕರಿಸಿದ್ದ ವಿಜಯ್ ಗುಪ್ತಾ ಮತ್ತು ಸಂತೋಷ್ ಗುಪ್ತಾ ಪೊಲೀಸರಿಗೆ ಸಿಕ್ಕಿಬಿದ್ದರೆ, ರವಿ ಪಾಂಡೆ ಹಾಗೂ ನರೇಶ್ ರಾವಲ್ ತಲೆಮರೆಸಿಕೊಂಡಿದ್ದರು. ಚಿನ್ನಾಭರಣ ಮತ್ತು ರೂ.2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯೊಂದಿಗೆ ಇವರ ತಂಡ ಪರಾರಿಯಾಗಿತ್ತು.
ಹಲವು ಪ್ರಕರಣದಲ್ಲಿ ಬೇಕಾಗಿದ್ದರಿಂದ ಪೊಲೀಸರಿಗೂ ಮೋಸ್ಟ್ ವಾಂಟೆಡ್ ಆಗಿದ್ದ ನರೇಶ್ ಕೇಸ್ರಿಮಲ್ಜಿ ರಾವಲ್ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಕ್ಕೆ ಕೇಸು ಹಸ್ತಾಂತರ ಆಗಿತ್ತು. ಪ್ರಕರಣದ ಮಾಸ್ಟರ್ ಮೈಂಡ್ ರಾವಲ್, ಪೊಲೀಸರಿಂದ ತಪ್ಪಿಸಿಕೊಳ್ಳಲು ಆಗಾಗ್ಗೆ ಮುಂಬೈ, ಚೆನ್ನೈ, ಬೆಳಗಾವಿ, ಉತ್ತರ ಕರ್ನಾಟಕದ ವಿವಿಧ ನಗರಗಳಲ್ಲಿ ಸುತ್ತಾಡುತ್ತ ತನ್ನ ಹೆಸರು ಮತ್ತು ಗುರುತನ್ನು ಬದಲಾಯಿಸುತ್ತ ತಲೆಮರೆಸಿಕೊಂಡಿದ್ದ.
ಮೋಸ್ಟ್ ವಾಂಟೆಡ್ ನರೇಶ್ ರಾವಲ್ ಬಗ್ಗೆ ಸುಳಿವು ನೀಡುವವರಿಗೆ ರೂ.45,000 ಬಹುಮಾನ ಘೋಷಿಸಲಾಗಿತ್ತು. ಇತ್ತೀಚೆಗಷ್ಟೇ ರಾವಲ್ ಉಡುಪಿಯಲ್ಲಿ ನೆಲೆಸಿದ್ದಾನೆ ಎಂಬ ಗುಪ್ತಚರ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ವಿಶೇಷ ತಂಡದ ಅಧಿಕಾರಿಗಳು ವ್ಯಾಪಾರಿಗಳಂತೆ ವೇಷ ಧರಿಸಿ, ಉಡುಪಿಗೆ ಆಗಮಿಸಿದ್ದರು. ಈ ವೇಳೆ ಮಾರ್ಬಲ್ ಕೆಲಸ ಮಾಡುತ್ತಿದ್ದ ರಾವಲ್ ಗುರುತನ್ನು ಪತ್ತೆ ಮಾಡಿದ್ದಾರೆ. ಇದಕ್ಕೂ ಹಿಂದೆ ಕಾರವಾರದಲ್ಲಿದ್ದಾಗ ಕೊರವ ಸಮುದಾಯದ ಮಹಿಳೆಯನ್ನು ಮದುವೆಯಾಗಿದ್ದ ರಾವಲ್, ಮಾರ್ಬಲ್ ಕಾರ್ಮಿಕ ಮತ್ತು ಕಾರು ಚಾಲಕನಾಗಿಯೂ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಸೂರತ್ ನಗರದ ಉಮ್ರಾ ಪೊಲೀಸ್ ಠಾಣೆಯಲ್ಲಿ ರಾವಲ್ ವಿರುದ್ಧ ಎರಡು ಮನೆ ದರೋಡೆ ಪ್ರಕರಣ ದಾಖಲಾಗಿತ್ತು. ಇನ್ನೊಬ್ಬ ಸಹಚರ ರವಿ ಪಾಂಡೆ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a major breakthrough, Gujarat police have arrested a key accused in a 2007 robbery and murder case in Surat, who had been absconding for 19 years. The arrest was made in Karnataka’s Udupi district after a covert operation by the Special Operations Group (SOG).The accused, Naresh Keshrimalji Rawal, had been living under fake identities across multiple locations in Karnataka, including Mumbai, Chennai, Belagavi, and other parts of North Karnataka, to evade arrest.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm