ಬ್ರೇಕಿಂಗ್ ನ್ಯೂಸ್
20-09-25 05:11 pm Mangalore Correspondent ಕ್ರೈಂ
ಮಂಗಳೂರು, ಸೆ.20 : ಇತ್ತೀಚೆಗೆ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಉಪ್ಪಿನಂಗಡಿಯ ಪೆರ್ನೆಯಲ್ಲಿ ಹಟ್ಟಿಯಿಂದ ದನಗಳನ್ನು ಕದ್ದೊಯ್ದು ಮಾಂಸ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತುಂಬೆ ಬಳಿ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಆ.15ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರನ್ನು ಸೆ.5ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲು ಮನೆಯೊಂದರ ಹಟ್ಟಿಯಿಂದ ಸಾಕು ದನವನ್ನು ಕದ್ದು ಅಲ್ಲಿಯೇ ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ತನಿಖೆ ಸಂದರ್ಭದಲ್ಲಿ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವುದು ಕಂಡುಬಂದಿತ್ತು. ಎರಡಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದರೆ ಅಂಥವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ದ.ಕ. ಎಸ್ಪಿ ಅರುಣ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Police have invoked the Karnataka Control of Organised Crimes Act (KCOCA) against individuals accused in recent cases of cattle theft and illegal slaughter in Tumbe and Uppinangady areas of Bantwal taluk.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm