ಬ್ರೇಕಿಂಗ್ ನ್ಯೂಸ್
22-09-25 08:16 pm Mangalore Correspondent ಕ್ರೈಂ
ಮಂಗಳೂರು, ಸೆ.23 : ಮಂಗಳೂರು ನಗರದಲ್ಲಿ ಕೊಕೇನ್ ಮತ್ತು ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಬೆನ್ನುಬಿದ್ದ ಸಿಸಿಬಿ ಘಟಕದ ಪೊಲೀಸರು ಒಟ್ಟು ಎರಡು ಪ್ರಕರಣಗಳಿಗೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾವೂರು ಗಾಂಧಿ ನಗರ ನಿವಾಸಿ ಚಿರಾಗ್ ಸನಿಲ್, ಅಶೋಕನಗರದ ಆಲ್ವಿನ್ ಕ್ಲಿಂಟನ್ ಡಿಸೋಜ, ಕೇರಳದ ಮಲಪ್ಪುರಂ ಮೂಲದ ಅಬ್ದುಲ್ ಕರೀಂ (52), ಕುಲಶೇಖರದ ಜನನ್ @ ಜನನ್ ಜಗನ್ನಾಥ (28), ಬೋಳೂರಿನ ರಾಜೇಶ್ ಬಂಗೇರ @ ರಕ್ಷಿತ್ (30), ದಂಬೆಲ್ ನಿವಾಸಿ ವರುಣ್ ಗಾಣಿಗ (28) ಬಂಧಿತರು.

ಕಾವೂರಿನ ಗಾಂಧಿ ನಗರದ ಮಲ್ಲಿ ಲೇ ಔಟ್ ಎಂಬಲ್ಲಿ ಸೆ.21ರಂದು ಬೆಳಗ್ಗೆ ಸ್ಕೂಟರ್ ನಲ್ಲಿ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಪತ್ತೆಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಕಾವೂರಿನ ನಿವಾಸಿಗಳಾದ ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿಸೋಜ ವಶಕ್ಕೆ ಪಡೆದವರಾಗಿದ್ದು, ಅವರಿಂದ ರೂ. 22,30,000/- ಮೌಲ್ಯದ 111.83 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ಡ್ರಗ್ಸ್ ಮೂಲದ ಬಗ್ಗೆ ವಿಚಾರಿಸಲಾಗಿ ಕೇರಳದ ಅಬ್ದುಲ್ ಕರೀಂ ಎಂಬಾತ ನೀಡಿದ ಹಣದಿಂದ ಮುಂಬೈಯಲ್ಲಿ ವಾಸವಿರುವ ಆಫ್ರಿಕನ್ ಪ್ರಜೆ ಬೆಂಜಮಿನ್ ಎಂಬಾತನಿಂದ ಆರೋಪಿ ಚಿರಾಗ್ ಸನಿಲ್ ಖರೀದಿ ಮಾಡಿ ತಂದಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2025 U/S 8(C), 21(C), 22(C) NDPS ACT ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಮಾದಕ ವಸ್ತು ಖರೀದಿಸಲು ಹಣ ನೀಡಿದ ಅಬ್ದುಲ್ ಕರೀಂ ಇ.ಕೆ ಎಂಬಾತನನ್ನು ಸೆ.22ರಂದು ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಲಾಯಿತು. ಸದ್ರಿ ಆರೋಪಿಗಳನ್ನು ವಿಚಾರಿಸಿದಾಗ ತಮ್ಮ ಬಳಿ ಇದ್ದ ಕೊಕೇನ್ ಮಾದಕ ವಸ್ತುಗಳನ್ನು ಈಗಾಗಲೇ ಮೂರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸಿಸಿಬಿ ಘಟಕದ ಪೊಲೀಸ್ ಉಪ ನಿರೀಕ್ಷಕರು ಸದರಿ ವ್ಯಕ್ತಿಗಳ ಮಾಹಿತಿ ಪಡೆದು ಸೆ.21ರಂದು ರಾತ್ರಿ 8.45 ಗಂಟೆಗೆ ಮಣ್ಣಗುಡ್ಡೆಯ ಸೆಂಟ್ರಲ್ ವೇರ್ ಹೌಸ್ ಬಳಿ ಮೂರು ಸ್ಕೂಟರ್ ಗಳಲ್ಲಿ ನಿಂತುಕೊಂಡಿದ್ದವರನ್ನು ವಶಕ್ಕೆ ಪಡೆದಾಗ ತಪ್ಪಿಸಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರಿಂದ ಸುಮಾರು 21.03 ಗ್ರಾಂ ಕೊಕೇನ್ (ಮೌಲ್ಯ ರೂ. 1,90000/) ಸ್ವಾಧೀನ ಪಡಿಸಿದ್ದು ಆರೋಪಿಗಳನ್ನು ಜನನ್ @ ಜನನ್ ಜಗನ್ನಾಥ, ರಾಜೇಶ್ ಬಂಗೇರ ಮತ್ತು ವರುಣ್ ಗಾಣಿಗ ಎಂದು ಗುರುತಿಸಲಾಗಿದೆ. ಇವರ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2025 ಕಲಂ 8(C), 22(b) NDPS ACT ಮತ್ತು ಕಲಂ3(5) B.N.S ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
The CCB police unit in Mangaluru has cracked down on a drug supply network, arresting six individuals in connection with two separate cases involving the sale of cocaine and MDMA in the city. Narcotics valued at over ₹25 lakh were seized during the operation.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm