ಬ್ರೇಕಿಂಗ್ ನ್ಯೂಸ್
27-09-25 02:16 pm Udupi Correspondent ಕ್ರೈಂ
ಉಡುಪಿ, ಸೆ.27 : ಖಾಸಗಿ ಬಸ್ ಮಾಲೀಕ ಮತ್ತು ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಸೈಫುದ್ದೀನ್ ಎಂಬವರನ್ನು ಮಲ್ಪೆ ಬಳಿಯ ಕೊಡವೂರಿನ ಮನೆಯಲ್ಲಿ ಆಗಂತುಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಮಧ್ಯಾಹ್ನ ವೇಳೆಗೆ ಸೈಫುದ್ದೀನ್ ಮನೆಗೆ ಬಂದಿದ್ದಾಗಲೇ ಕಾರಿನಲ್ಲಿ ಬಂದಿದ್ದ ತಂಡವೊಂದು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಹರಿರಾಮ್ ಶಂಕರ್, ಮೂವರು ಕೃತ್ಯದಲ್ಲಿ ಭಾಗಿಯಾದ ಮಾಹಿತಿ ಇದೆ, ಯಾಕಾಗಿ, ಯಾರು ಕೃತ್ಯ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ಬಳಿಕ ತಿಳಿಯಲಿದೆ, ನಾವು ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ ಎಂದಿದ್ದಾರೆ.


ಘಟನೆ ಬೆನ್ನಲ್ಲೇ ಮಲ್ಪೆ ಪೊಲೀಸರು ಮತ್ತು ಉಡುಪಿ ಪೊಲೀಸರು ನಾಕಾಬಂದಿ ಮಾಡಿ ತಪಾಸಣೆ ಚುರುಕುಗೊಳಿಸಿದ್ದಾರೆ. ಸೈಫುದ್ದೀನ್ ಉಡುಪಿ ನಗರ ಭಾಗದಲ್ಲಿ ಸಂಚರಿಸುತ್ತಿದ್ದ ಎಕೆಎಂಎಸ್ ಹೆಸರಿನ ಬಸ್ಸನ್ನು ನಡೆಸುತ್ತಿದ್ದರು. ಮಲ್ಪೆ ಠಾಣೆಯಲ್ಲಿ ರೌಡಿಶೀಟರ್ ಎನ್ನಲಾಗುತ್ತಿದ್ದು ಹಳೆ ದ್ವೇಷದಿಂದಲೇ ಕೃತ್ಯ ಎಸಗಿರುವ ಅನುಮಾನ ಇದೆ. ಆತ್ರಾಡಿ ನಿವಾಸಿಯಾಗಿರುವ ಸೈಫುದ್ದೀನ್ ಇತ್ತೀಚೆಗಷ್ಟೇ ಮಲ್ಪೆಯಲ್ಲಿ ಹೊಸ ಮನೆ ಖರೀದಿಸಿದ್ದರು. ಅಲ್ಲಿ ಒಬ್ಬರೇ ಇದ್ದಾಗಲೇ ಆಗಂತುಕರು ಕೃತ್ಯ ಎಸಗಿದ್ದಾರೆ.
A shocking daylight murder took place in Malpe near Kodavoor, where private bus owner and known rowdy-sheeter Saifuddin was brutally hacked to death inside his newly purchased house. A gang of three arrived in a car and attacked him with lethal weapons when he returned home in the afternoon. Udupi SP Hariram Shankar visited the spot and confirmed that three assailants are suspected, with teams formed to trace the culprits. Police have intensified checks and nakabandis across Udupi. Saifuddin, who operated the AKMS bus in Udupi city, was reportedly killed due to old rivalry.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am