ಬ್ರೇಕಿಂಗ್ ನ್ಯೂಸ್
08-10-25 12:23 pm Mangalore Correspondent ಕ್ರೈಂ
ಮಂಗಳೂರು, ಅ.8 : ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮೂಡುಬಿದ್ರೆ ಪೊಲೀಸರು ದಾಳಿ ನಡೆಸಿ ಮೂರು ದನಗಳನ್ನು ರಕ್ಷಿಸಿದ್ದಾರೆ.
ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ದನ ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದಾಚೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಮಾಂಸವನ್ನು ಪಡೆಯಲು ಬಂದಿದ್ದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಪಿಎಸ್ಐ ಕೃಷ್ಣಪ್ಪ, ಅಖೀಲ್ ಅಹ್ಮದ್ ಹಾಗೂ ನಾಗರಾಜ್ ಕಾರ್ಯಾಚರಣೆ ನಡೆಸಿದ್ದರು.
ಕಾಟಿಪಳ್ಳದ ಮನೆಯಲ್ಲೇ ಗೋಹತ್ಯೆ
ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟು ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನ ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬಂದಿ ದಾಳಿ ಮಾಡಿ ಮೂವರು ಆರೋಪಿಗಳಾದ ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41) ಎ.ಕೆ. ಆಶೀಕ್, (22) ಅವರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ತಲೆಮರೆಸಿಕೊಂಡಿದ್ದಾನೆ. ಇಮ್ಮಿಯಾಜ್ ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಆಶೀಕ್ ಜತೆ ಸೇರಿಕೊಂಡು ವಧೆ ಮಾಡಿ ಸುಮಾರು 233.89 ಕೆಜಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು.
ಇಮ್ಮಿಯಾಜ್ ಮೇಲೆ ಮಂಗಳೂರು ನಗರದ ಬರ್ಕೆ, ಮೂಡುಬಿದಿರೆ, ಪಣಂ ಬೂರು, ಸುರತ್ಕಲ್ ಠಾಣೆ ಸೇರಿದಂತೆ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಠಾಣೆಯಲ್ಲಿ ಸುಮಾರು 9 ಪ್ರಕರಣಗಳು ದಾಖಲಾಗಿವೆ.
Police in Mangaluru have busted two illegal slaughterhouses operating in Moodbidri and Suratkal, seizing around 280 kilograms of beef and rescuing three cows. In Moodbidri’s Gantalkatte area, police raided the residence of Jaleel Kallabettu after receiving a tip-off about cow slaughter taking place behind his house.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm