ಬ್ರೇಕಿಂಗ್ ನ್ಯೂಸ್
09-10-25 05:30 pm Mangalore Correspondent ಕ್ರೈಂ
ಉಳ್ಳಾಲ, ಅ.9 : ಆಭರಣಗಳನ್ನ ಪಾಲಿಶಿಂಗ್ ಮಾಡಿಸುವ ಸೋಗಿನಲ್ಲಿ ಬಂದ ಅಪರಿಚಿತ ಮಧ್ಯ ವಯಸ್ಕನೋರ್ವ ವಿಧವೆಯೋರ್ವರನ್ನ ಯಾಮಾರಿಸಿ ಆಕೆಯ ಕತ್ತಿನ ಸರದಿಂದ 14 ಗ್ರಾಂ ಚಿನ್ನವನ್ನ ಕರಗಿಸಿ ಹೊತ್ತೊಯ್ದ ಘಟನೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಅಂಬ್ಲಮೊಗರು ನಿವಾಸಿ ಸುಂದರಿ (60) ಎಂಬ ವಿಧವೆ ವಂಚಕನಿಂದ ಮೋಸ ಹೋದವರು. ಸುಂದರಿಯವರು ದಿನನಿತ್ಯಲೂ ಸುದರ್ಶನ್ ಶೆಟ್ಟಿ ಎಂಬವರ ಮನೆಗೆ ಮನೆಕೆಲಸಕ್ಕೆ ತೆರಳಿ ಮಧ್ಯಾಹ್ನ 12 ಗಂಟೆಗೆ ಮರಳುತ್ತಿದ್ದರು. ನಿನ್ನೆಯೂ ಕೆಲಸಕ್ಕೆ ತೆರಳಿದ್ದ ಸುಂದರಿ ಅವರು ಬೆಳಗ್ಗೆ 11.30ಕ್ಕೆ ಬೇಗನೆ ಕೆಲಸ ಮುಗಿಸಿ ಹಿಂತಿರುಗಿದ್ದಾರೆ. ಅವರು ಮನೆಯ ಕಡೆ ತೆರಳುತ್ತಿದ್ದ ವೇಳೆ ಅಂಬ್ಲಮೊಗರುವಿನ ಕಂಬಳ ಗದ್ದೆಯ ನಿರ್ಜನ ಪ್ರದೇಶದಲ್ಲಿ ಓರ್ವ ಅಪರಿಚಿತ ಮಧ್ಯ ವಯಸ್ಕ ಎದುರಾಗಿದ್ದು ಈ ಭಾಗದಲ್ಲಿ ಎಷ್ಟು ಮನೆಗಳು ಇವೆಯೆಂದು ಸುಂದರಿಯವರಲ್ಲಿ ವಿಚಾರಿಸಿದ್ದಾನೆ.
ಈ ವೇಳೆ ಆತ ತನ್ನಲ್ಲಿದ್ದ ಬ್ಯಾಗಿನಿಂದ ಚಿನ್ನವನ್ನ ಹೋಲುವ ಬಲೆಯೊಂದನ್ನ ಹೊರತೆಗೆದು ತೋರಿಸಿ ತಾನು ಈ ರೀತಿ ಹೊಳಪು ಬರುವಂತೆ ಚಿನ್ನಾಭರಣಗಳನ್ನ ಪಾಲಿಶ್ ಮಾಡುತ್ತೇನೆಂದು ಹೇಳಿಕೊಂಡಿದ್ದು, ಸುಂದರಿ ಅವರ ಕತ್ತಲ್ಲಿದ್ದ ಚಿನ್ನದ ಸರವನ್ನ ಪಾಲಿಶ್ ಮಾಡಿಕೊಡುವುದಾಗಿ ಹೇಳಿದ್ದಾನೆ. ಆರಂಭದಲ್ಲಿ ನಿರಾಕರಿಸಿದ ಮಹಿಳೆ ಬಳಿಕ 18 ಗ್ರಾಂ ತೂಗುವ ಚಿನ್ನದ ಸರವನ್ನ ಕತ್ತಿನಿಂದ ತೆಗೆದು ಅಪರಿಚಿತನಿಗೆ ನೀಡಿದ್ದಾರೆ. ಅಪರಿಚಿತ ಸರವನ್ನ ಯಾವುದೋ ನೀರಲ್ಲಿ ಸ್ವಲ್ಪ ಹೊತ್ತು ಅದ್ದಿ ತೆಗೆದು ಮಹಿಳೆಗೆ ಹಿಂತಿರುಗಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಸರದ ಗಾತ್ರ ಇದ್ದಕ್ಕಿದ್ದಂತೆ ಕಡಿಮೆ ಆದುದನ್ನ ಕಂಡು ವಿಚಲಿತರಾದ ಮಹಿಳೆ ಸರವನ್ನ ಮಾಪನದಲ್ಲಿ ಪರಿಶೀಲಿಸಿದಾಗ ಅದರಲ್ಲಿ 14 ಗ್ರಾಂನಷ್ಟು ಚಿನ್ನವು ಕರಗಿಹೋಗಿದ್ದು, ತಾನು ಮೋಸ ಹೋಗಿರುವ ಬಗ್ಗೆ ಆಕೆಗೆ ಅರಿವಾಗಿದೆ.
ಅಂಬ್ಲಮೊಗರು ಪ್ರದೇಶದ ಜನರು ಮಹಿಳೆಯ ಚಿನ್ನವನ್ನ ತೊಳೆದು ಯಾಮಾರಿಸಿದ ವ್ಯಕ್ತಿಯನ್ನ ಹುಡುಕಾಟ ನಡೆಸಿದ್ದು ಅಷ್ಟರಲ್ಲೇ ಅಲ್ಲಿಂದ ಎಸ್ಕೇಪ್ ಆಗಿದ್ದ. ನಿನ್ನೆ ಸಂಜೆ ಸುಂದರಿ ಅವರು ಕೊಣಾಜೆ ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಚಿನ್ನ , ಬೆಳ್ಳಿಯ ಆಭರಣಗಳನ್ನ ತೊಳೆದು ಕೊಡುವ ನೆಪದಲ್ಲಿ ವಂಚಕರು ನಿಮ್ಮ ಮನೆಗೂ ಭೇಟಿ ನೀಡಬಹುದು. ಆ ರೀತಿಯ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ 112/100 ತುರ್ತು ಪೊಲೀಸ್ ಸಹಾಯವಾಣಿಗೆ ಕರೆ ಮಾಡುವಂತೆ ಕೊಣಾಜೆ ಪೊಲೀಸರು ಎಚ್ಚರಿಸಿದ್ದಾರೆ.
A widowed woman from Amblamogaru in Ullal taluk was cheated by an unidentified middle-aged man who, under the guise of polishing jewellery, melted away 14 grams of gold from her necklace and fled with it on Wednesday.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm