ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm