ಬ್ರೇಕಿಂಗ್ ನ್ಯೂಸ್
19-10-25 11:09 pm Mangalore Correspondent ಕ್ರೈಂ
ಮಂಗಳೂರು, ಅ.19 : ಮಂಗಳೂರು ನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ದಾಖಲಾದ ಒಟ್ಟು 9 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿ ಫರೀದಾ ಬೇಗಂ ಎಂಬಾಕೆಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮಂಗಳೂರು ನಗರದ ಎಂಪಾಯರ್ ಮಾಲ್ ನಲ್ಲಿ ಲ್ಯಾಪ್ ಟಾಪ್ ಬಜಾರ್ ಎಂಬ ಸ್ಟೋರ್ ಇಟ್ಟುಕೊಂಡು ಎಲ್ಲಾ ಕಂಪನಿಗಳ ಲ್ಯಾಪ್ ಟಾಪ್ ಗಳನ್ನು ಸೇಲ್ಸ್ ಮತ್ತು ಸರ್ವೀಸ್ ಮಾಡಿಕೊಂಡಿದ್ದ ಜಯರಾಮ ಎಂಬವರಿಗೆ ಮೋಸಗೊಳಿಸಿದ ಪ್ರಕರಣದಲ್ಲಿ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಜಯರಾಮ ಅವರಿಗೆ ಸೇರಿದ ಈ ಶಾಪ್ ನಿಂದ ಆಪಲ್ ಕಂಪನಿಯ Macbook pro A2141 ಲ್ಯಾಪ್ ಟಾಪ್, ಡೆಲ್ ಕಂಪನಿಯ Dell 5440/Core i5-13/16GB ಲ್ಯಾಪ್ ಟಾಪ್ ಮತ್ತು ಆಪಲ್ ಕಂಪನಿಯ Macbook pro 2442 2021 M1 PRO ಲ್ಯಾಪ್ ಟಾಪ್ ಅನ್ನು ಆರೋಪಿತೆ ಫರೀದಾ ಬೇಗಂ ತನ್ನ ಪರಿಚಯದ ವ್ಯಕ್ತಿಯ ಮೂಲಕ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಲ್ಯಾಪ್ ಟಾಪ್ ಗಳನ್ನು ಖರೀದಿಸಿ ಪಿರ್ಯಾದಿದಾರಿಗೆ ಒಟ್ಟು ರೂ 1,98,000/- ರೂ. ಹಣವನ್ನು ಪಾವತಿಸದೇ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಬರ್ಕೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮೋಹನ ಕೊಟ್ಟಾರಿ ನೇತೃತ್ವದಲ್ಲಿ ಪ್ರಕರಣದ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಮಹಿಳಾ ಸಿಬ್ಬಂದಿಗಳ ಮೂಲಕ ಪತ್ತೆ ಮಾಡಿ ಮಹಿಳೆಯನ್ನು ಬಂಧಿಸಿದ್ದಾರೆ. ಫರಿದಾ ಬೇಗಂ (28) ಮಂಗಳೂರು ತಾಲೂಕಿನ ಕುಪ್ಪೆಪದವು ನಿವಾಸಿಯಾಗಿದ್ದು ನ್ಯಾಯಾಲಯವು ನ.3ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಮಹಿಳೆ ಪ್ರತಿಷ್ಠಿತ ಚಿನ್ನಾಭರಣಗಳ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳಿಗೆ ಭೇಟಿ ನೀಡಿ ತನ್ನ ಮಾತುಗಳಿಂದ ಅಂಗಡಿ ಮಾಲಕರನ್ನು ನಂಬಿಸಿ, ವಿವಿಧ ಬ್ಯಾಂಕ್ ಗಳ ಮಾನ್ಯತೆ ಇಲ್ಲದ ಚೆಕ್ ಗಳನ್ನು ನೀಡಿ ಬೆಲೆಬಾಳುವ ಸೊತ್ತುಗಳನ್ನು ಖರೀದಿಸಿ ಮೋಸಗೊಳಿಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆ, ಕಾವೂರು, ಬಜಪೆ, ಮೂಡಬಿದ್ರೆ, ಮುಲ್ಕಿ ಪೊಲೀಸ್ ಠಾಣೆಯಲ್ಲಿ ತಲಾ ಒಂದೊಂದು ಮೋಸ, ವಂಚನೆಯ ಪ್ರಕರಣಗಳು ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ಹಾಗೂ ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆಯಲ್ಲಿ ಒಂದು ಮೋಸ ವಂಚನೆಯ ಪ್ರಕರಣವು ದಾಖಲಾಗಿರುತ್ತದೆ.
ಅಲ್ಲದೇ ಆರೋಪಿ ಫರೀದಾ ಬೇಗಂ ಮುಲ್ಕಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಪ್ರಕರಣದ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ವಾರೆಂಟ್ ಹೊರಡಿಸಿತ್ತು.ಕಾವೂರು ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಳು.
Mangaluru police have arrested Farida Begum (28) of Kuppepadavu for duping multiple shop owners across Mangaluru, Dakshina Kannada, and Udupi districts. She allegedly used fake cheques to purchase expensive laptops and jewellery by charming shopkeepers with convincing talk.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
19-10-25 11:09 pm
Mangalore Correspondent
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm