ಬ್ರೇಕಿಂಗ್ ನ್ಯೂಸ್
21-10-25 05:12 pm Mangalore Correspondent ಕ್ರೈಂ
ಮಂಗಳೂರು, ಅ.21 : ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ಅಪಾರ್ಟ್ಮೆಂಟಿನ ಮೂರು ಮನೆಗಳಿಗೆ ರಾತ್ರಿ ವೇಳೆ ಕಳ್ಳರು ನುಗ್ಗಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿಗಳನ್ನು ಕಳವುಗೈದ ಘಟನೆ ನಡೆದಿದ್ದು ಉರ್ವಾ ಪೊಲೀಸರು ಶೀಘ್ರ ಕಾರ್ಯಾಚರಣೆಯಲ್ಲಿ ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21) ಎಂದು ಗುರುತಿಸಲಾಗಿದೆ.
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಅ.19ರಂದು ರಾತ್ರಿ ಮೂರು ಫ್ಲಾಟ್ ಗಳಿಗೆ ಏಕಕಾಲದಲ್ಲಿ ಕಳ್ಳರು ನುಗ್ಗಿದ್ದಾರೆ. ಮನೆಮಂದಿ ಮಲಗಿದ್ದಾಗಲೇ ಕಿಚನ್ ವಿಂಡೋ ಮೂಲಕ ನುಗ್ಗಿದ್ದ ಕಳ್ಳರು, ಮೂರು ಮನೆಗಳಿಂದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ರೂ.5000 ನಗದು ಹಣ, 3000 ದಿರ್ಹಮ್ ಹಾಗೂ ಮೊಬೈಲ್ ಫೋನನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ 104/2025 ಕಲಂ 331(4), 305(ಎ) ಬಿಎನ್ಎಸ್ ಅಂತೆ ಪ್ರಕರಣ ದಾಖಲಾಗಿತ್ತು. ಮೂರು ಕಡೆ ಕಳವಾಗಿದ್ದರೂ ಒಂದೇ ಎಫ್ಐಆರ್ ನಲ್ಲಿ ತೋರಿಸಲಾಗಿತ್ತು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದಾರೆ. ಪ್ರಕರಣ ದಾಖಲಾಗಿ ಕೇವಲ 20 ಗಂಟೆಯಲ್ಲಿ ಕಳವಿನಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದು ಆರೋಪಿಗಳಿಂದ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣ, ರೂ 5000/- ನಗದು ಹಣ, ರೂ. 70,000/- ಬೆಲೆಯ 3000 ದಿರ್ಹಮ್ ವಿದೇಶಿ ಕರೆನ್ಸಿ ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಅಭಿಜಿತ್ ದಾಸ್ ಮೇಲೆ ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಕಡೆ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿಗಳು ಬೆಂಗಳೂರಿಗೆ ತೆರಳಿದ ಖಚಿತ ಮಾಹಿತಿಯಂತೆ, ಬೆಂಗಳೂರು ಪೊಲೀಸರ ಸಹಕಾರದಿಂದ ದಸ್ತಗಿರಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ವಶಕ್ಕೆ ಪಡೆದು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
Thieves broke into three apartments at Lalbagh Hat Hill in Mangaluru while the residents were asleep, stealing around ₹20 lakh worth of gold ornaments, cash, and foreign currency. Urwa police cracked the case within 20 hours, arresting two Assam-origin suspects — Abhijit Das (24) and Deba Das (21) — in Bengaluru.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am