ಬ್ರೇಕಿಂಗ್ ನ್ಯೂಸ್
24-10-25 10:07 am Mangalore Correspondent ಕ್ರೈಂ
ಮಂಗಳೂರು, ಅ.24 : ಸುರತ್ಕಲ್ ಪೇಟೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಮುಸ್ಲಿಂ ಯುವಕರಿಬ್ಬರಿಗೆ ಚೂರಿ ಇರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಾಟಿಪಳ್ಳ ಕೃಷ್ಣಾಪುರ ನಿವಾಸಿಗಳಾದ ಮುಕ್ಷಿದ್ (28) ಮತ್ತು ನಿಜಾಮ್ (24) ಇರಿತಕ್ಕೊಳಗಾದವರು.
ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸುರತ್ಕಲ್ ನಲ್ಲಿ ದೀಪಕ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಮದ್ಯ ಸೇವನೆಗೆ ಬಂದಿದ್ದರು. ಇವರು ಮದ್ಯ ಸೇವಿಸುತ್ತಿದ್ದಾಗ ಅಲ್ಲಿಯೇ ಬೇರೊಂದು ಟೇಬಲ್ನಲ್ಲಿದ್ದ ನಾಲ್ವರ ತಂಡದ ಜೊತೆಗೆ ಜಗಳವಾಗಿದೆ. ಎರಡು ತಂಡಗಳ ಮಧ್ಯೆ ಮಾತಿನ ಜಗಳ ಮುಂದುವರೆದ ಹಿನ್ನೆಲೆಯಲ್ಲಿ ಬಾರ್ ಸಿಬಂದಿ ಎರಡೂ ತಂಡಗಳನ್ನು ಅಲ್ಲಿಂದ ಹೊರಕ್ಕೆ ಕಳುಹಿಸಿದ್ದಾರೆ. ಬಾರ್ ನಿಂದ ಹೊರ ಬಂದ ನಂತರವೂ ಹೊಡೆದಾಟ ನಡೆದಿದ್ದು ಆರೋಪಿಗಳಲ್ಲಿ ಒಬ್ಬಾತ ಚೂರಿಯಿಂದ ಇರಿದಿದ್ದಾನೆ.

ನಿಜಾಮ್ ಎಂಬಾತನ ಹೊಟ್ಟೆ ಮತ್ತು ಕಿವಿಯ ಭಾಗಕ್ಕೆ ಚೂರಿ ಇರಿತವಾಗಿದ್ದು ಅತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಅಡ್ಡ ಬಂದ ಮುಕ್ಷಿದ್ ಮೇಲೂ ಚೂರಿ ಕೈಗೆ ತಾಗಿದ್ದು ಗಾಯವಾಗಿದೆ. ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಗಳ ಶೋಧಕ್ಕೆ ಮುಂದಾಗಿದ್ದಾರೆ. ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತ ಮತ್ತು ಸುರತ್ಕಲ್ ರೌಡಿಶೀಟರ್ ಗುರುರಾಜ್, ಅಲೆಕ್ಸ್ ಸಂತೋಷ್, ಸುಶಾಂತ್, ನಿತಿನ್ ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ, ಶೀಘ್ರದಲ್ಲೇ ಬಂಧನ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
A violent clash broke out between two groups at a bar and restaurant in Suratkal, Mangaluru, on Thursday night, resulting in a knife attack on two Muslim youths — Muksid (28) and Nizam (24) from Krishnapura, Katipalla. The altercation began inside the bar and continued outside after both groups were asked to leave.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am