ಬ್ರೇಕಿಂಗ್ ನ್ಯೂಸ್
05-11-25 05:27 pm Bangalore Correspondent ಕ್ರೈಂ
ಬೆಂಗಳೂರು, ನ.5 : ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೋಟ್ಯಂತರ ರೂಪಾಯಿ ಹಣವನ್ನು ದುರ್ಬಳಕೆ ಮಾಡಿದ ಪ್ರಕರಣದಲ್ಲಿ ಸೊಸೈಟಿ ಸಿಇಓ ಸೇರಿ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೊಸೈಟಿ ಸಿಇಓ ಗೋಪಿನಾಥ್ ಹಾಗೂ ಅಕೌಂಟ್ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಇಪಿಎಫ್‌ಒ ನೌಕರರೇ ಸೇರಿ 61 ವರ್ಷಗಳ ಹಿಂದೆ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ರಚಿಸಿಕೊಂಡಿದ್ದರು. ಇಪಿಎಫ್‌ಒ ನೌಕರರಿಗೆ ಮಾತ್ರವೇ ಸೊಸೈಟಿಯಲ್ಲಿ ಹೂಡಿಕೆಗೆ ಅವಕಾಶ ನೀಡಲಾಗಿತ್ತು. ನೂರಾರು ಜನ ನೌಕರರು ತಮ್ಮ ಉಳಿತಾಯದ ಹಣವನ್ನು ಸೊಸೈಟಿಯಲ್ಲಿ ಹೂಡಿಕೆ ಮಾಡಿದ್ದರು. ಆ ಹಣವನ್ನು ಅವಶ್ಯಕತೆ ಇರುವ ನೌಕರರಿಗೆ ಸಾಲದ ರೂಪದಲ್ಲಿ ನೀಡುತ್ತಿದ್ದ ಸೊಸೈಟಿ, ಹೂಡಿಕೆ ಮಾಡಿದ್ದವರ ಖಾತೆಗಳಿಗೆ ಪ್ರತಿ ತಿಂಗಳು ಬಡ್ಡಿಯ ಹಣವನ್ನೂ ಸಂದಾಯ ಮಾಡುತ್ತಿತ್ತು. ಆದರೆ, 3 ತಿಂಗಳಿನಿಂದ ಬಡ್ಡಿಯ ಹಣ ಖಾತೆಗೆ ಸಂದಾಯವಾಗದಿದ್ದಾಗ ಹೂಡಿಕೆದಾರರು ತೆರಳಿ ಸೊಸೈಟಿಯ ಖಾತೆಯನ್ನು ಪರಿಶೀಲಿಸಿದ್ದರು. ಆಗ ಕೇವಲ 3 ಕೋಟಿ ರೂ. ಮಾತ್ರವೇ ಸಾಲ ನೀಡಲಾಗಿದ್ದು, ಉಳಿದ ಹಣ ಸೊಸೈಟಿಯ ಖಾತೆಯಿಂದ ಖಾಲಿಯಾಗಿರುವುದು ಪತ್ತೆಯಾಗಿತ್ತು.
ಹೂಡಿಕೆಯ ಹಣವನ್ನು ಸೊಸೈಟಿಯ ಖಾತೆಯಿಂದ ಅನಧಿಕೃತವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಹೂಡಿಕೆದಾರರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸೊಸೈಟಿ ಸಿಇಓ ಮತ್ತು ಸಿಬಂದಿ ಕೈವಾಡ ಕಂಡುಬಂದಿದ್ದು ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಒ ಗೋಪಿನಾಥ್, ಸಿಬ್ಬಂದಿಯಾದ ಜಗದೀಶ್, ಲಕ್ಷ್ಮೀ, ಲಿಂಗೇಗೌಡ ಹಾಗೂ ರಾಮಾನುಜ ಎಂಬವರ ಮನೆಗಳ ಮೇಲೆ ದಾಳಿ ನಡೆಸಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 300ಕ್ಕೂ ಅಧಿಕ ಠೇವಣಿದಾರರು ಹೂಡಿಕೆ ಮಾಡಿದ್ದ ಸುಮಾರು 70 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರ್.ಆರ್. ನಗರ, ಜೆ.ಪಿ.ನಗರ, ಅಂಜನಾಪುರದಲ್ಲಿರುವ ಆರೋಪಿತರ ನಿವಾಸಗಳು, ರಿಚ್‌ಮಂಡ್ ಸರ್ಕಲ್‌ನಲ್ಲಿರುವ ಸೊಸೈಟಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ದಾಳಿ ವೇಳೆ ಚಿನ್ನಾಭರಣ, ನಗದು ಮತ್ತು ಹೂಡಿಕೆಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಓ ಹಾಗೂ ಅಕೌಂಟೆಂಟ್‌ಗೆ ಸಂಬಂಧಿಸಿದ ವ್ಯಕ್ತಿಯನ್ನ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಆರೋಪಿಗಳ ಆರ್ಥಿಕ ಸ್ಥಿತಿಗತಿ, ಆಸ್ತಿ ವಿವರಗಳು ಹಾಗೂ ಅವರ ಆದಾಯವನ್ನ ಪರಿಶೀಲಿಸಿದಾಗ ಒಂದಕ್ಕೊಂದು ಹೊಂದಾಣಿಕೆಯಾಗುತ್ತಿಲ್ಲ. ಆರೋಪಿತರು ಹೊಂದಿರುವ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನ ವಶಪಡಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆ. ಎಷ್ಟು ಹಣ ವಂಚನೆಯಾಗಿದೆ ಮತ್ತು ಹಣ ಯಾವುದಕ್ಕೆಲ್ಲ ದುರ್ಬಳಕೆಯಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ತಿಳಿಸಿದ್ದಾರೆ.
A major financial scam has come to light in the EPFO Credit Co-operative Society in Bengaluru, where employees allegedly embezzled nearly ₹70 crore collected from staff savings over the past 60 years.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm