ಬ್ರೇಕಿಂಗ್ ನ್ಯೂಸ್
26-11-25 10:43 pm Mangalore Correspondent ಕ್ರೈಂ
ಮಂಗಳೂರು, ನ.26 : ಧರ್ಮಸ್ಥಳ ದೇವಸ್ಥಾನದಲ್ಲಿ ಮಹಿಳೆಯರ ಬ್ಯಾಗ್ ನಿಂದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ತಾಯಿ- ಮಗಳಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
2025ರ ಮೇ 3ರಂದು ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಲತಾ ಎಂಬವರ ಬ್ಯಾಗ್ ನಲ್ಲಿ ಇರಿಸಿದ್ದ 6,79,000 ರೂ. ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳಾದ ಹುಬ್ಬಳ್ಳಿ ನಗರದ ಸಟಲ್ಮೆಂಟ್ ನಿವಾಸಿ ಬಿ.ಬಿ.ಜಾನ್(59) ಮತ್ತು ಆಕೆಯ ಮಗಳು ಆರತಿ @ಮಸಾಬಿ @ ಅಸ್ಮಾ (34) ಎಂಬವರನ್ನು ನ.23ರಂದು ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳದ ದ್ವಾರದ ಬಳಿ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮುಂದಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ನಡೆಸಿದಾಗ ಆರೋಪಿಗಳ ಹುಬ್ಬಳಿ ಮನೆಯಿಂದ ಕಳ್ಳತನ ಮಾಡಿದ ಸುಮಾರು 5,32,000 ಸಾವಿರ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ್ ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಉಪ ವಿಭಾಗ ಡಿವೈಎಸ್ಪಿ ರೋಹಿನಿ ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ ನಿರೀಕ್ಷಕ ಬಿ.ಜಿ ಸುಬ್ಬಾಪುರ್ ಮಠ್ ರವರ ತಂಡದಲ್ಲಿ ಧರ್ಮಸ್ಥಳ ಪೊಲೀಸ್ ಉಪ ನಿರೀಕ್ಷಕ ಸಮರ್ಥ್ ಗಾಣಿಗೇರ, ಸಿಬ್ಬಂದಿ ರಾಜೇಶ್, ಪ್ರಶಾಂತ್, ಸಂದೀಪ್, ಮಲ್ಲಿಕಾರ್ಜುನ್, ಶಶಿಕುಮಾರ್, ಮಂಜುನಾಥ್ ಪಾಟೀಲ್, ಪ್ರಮೋದಿನಿ, ಸುನಿತಾ, ಸೌಭಾಗ್ಯ, ದೀಪಾ, ಉಷಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
A mother–daughter theft gang from Hubballi, involved in stealing gold ornaments from women devotees at Dharmasthala temple, has been arrested. The duo—59-year-old B.B. Jaan and her daughter Aarthi alias Masabi alias Asma (34)—were caught on November 23 while attempting another theft near the temple gate.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 03:47 pm
HK News Staffer
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm