ಬ್ರೇಕಿಂಗ್ ನ್ಯೂಸ್
02-12-25 06:37 pm Mangalore Correspondent ಕ್ರೈಂ
ಪುತ್ತೂರು, ಡಿ.2 : ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಕದ್ದುಕೊಂಡು ಸಾಗಿಸುತ್ತಿದ್ದಾಗ ಕಾರು ಕೆಟ್ಟು ಹೋಗಿದ್ದು ಕರುಗಳನ್ನು ಪುತ್ತೂರಿನ ನರಿಮೊಗರು ಎಂಬಲ್ಲಿ ನಡು ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪ್ರಕರಣ ದಾಖಲಿಸಿ ಇಬ್ಬರು ಗೋವು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಪಾಣಾಜೆ ನಿವಾಸಿ ಪ್ರೇಮರಾಜ್ ಎಂಬವರ ದೂರಿನಂತೆ, ನ.29 ರಂದು ಬೆಳಗ್ಗೆ ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ, ಸದ್ರಿ ವಾಹನ ರಸ್ತೆಯಲ್ಲಿ ಕೆಟ್ಟು ಹೋಗಿರುವುದರಿಂದ, ವಾಹನದಲ್ಲಿದ್ದ ಗೋವುಗಳನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಅವುಗಳನ್ನು ಪ್ರೇಮರಾಜ್ ಸ್ಥಳೀಯರ ಸಹಕಾರದಿಂದ ರಕ್ಚಿಸಿ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿರುತ್ತಾರೆ.
ಸದ್ರಿ ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯವಿದ್ದು, ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ದೂರಿನಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2025, ಕಲಂ: 4, 5 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ಮತ್ತು ಕಲಂ: 303(1) BNS 2023 ಮತ್ತು 106 BNSS -2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂಬವರು ಕೆಎ 52 4889 ನೋಂದಣಿಯ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುತ್ತಿದ್ದ ವೇಳೆ ವಾಹನ ಕೆಟ್ಟು ಹೋಗಿದ್ದರಿಂದ ಆರೋಪಿಗಳು ಸದ್ರಿ ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿದ್ದರು. ಸದ್ರಿ ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Four calves being illegally transported in an Innova car were abandoned on the roadside in Narimogaru, Puttur, after the vehicle broke down. Based on a complaint by local resident Premaraj, police rescued the animals and began an investigation.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 07:23 pm
Mangalore Correspondent
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm