ಬ್ರೇಕಿಂಗ್ ನ್ಯೂಸ್
02-12-25 10:48 pm Bangalore Correspondent ಕ್ರೈಂ
ಬೆಂಗಳೂರು, ಡಿ.2 : ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೀಡುವುದಾಗಿ ನಂಬಿಸಿ, ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ಗುರೂಜಿ ಒಬ್ಬನನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯ್ ಗುರೂಜಿ ಎಂಬಾತ ಬಂಧಿತನಾಗಿದ್ದು ಆತನಿಗೆ ಸಹಕಾರ ನೀಡುತ್ತಿದ್ದ ವ್ಯಕ್ತಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ನಂಬಿಸಿ, ಸಾಫ್ಟ್ವೇರ್ ಎಂಜಿನಿಯರ್ ತೇಜಸ್ ಎಂಬವರಿಂದ 48 ಲಕ್ಷ ರು. ಪಡೆದು ವಂಚಿಸಿದ್ದು ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವಿಜಯ್ ಗುರೂಜಿ ಹಾಗೂ ಆತನಿಗೆ ಸೇರಿದ ವಿಜಯಲಕ್ಷ್ಮಿ ಆಯುರ್ವೇದಿಕ್ ಶಾಪ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದು ಗೊತ್ತಾದ ಮೇಲೆ ನಕಲಿ ಗುರೂಜಿ ನಾಪತ್ತೆಯಾಗಿದ್ದ. ಆರೋಪಿ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.
ಲೈಂಗಿಕ ಸಮಸ್ಯೆಗಾಗಿ ಕೆಂಗೇರಿಯ ಆಸ್ಪತ್ರೆಯಲ್ಲಿ ತೇಜಸ್ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆ ಪಕ್ಕದಲ್ಲಿ ಹಾಕಿದ್ದ ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಎಂಬ ಫಲಕ ನೋಡಿ, ಮೇ ತಿಂಗಳಲ್ಲಿ ಅಲ್ಲಿಗೆ ಭೇಟಿ ಕೊಟ್ಟಿದ್ದರು. ಅಲ್ಲಿಯೇ ಟೆಂಟ್ನಲ್ಲಿದ್ದ ವ್ಯಕ್ತಿಯೊಬ್ಬ ವಿಜಯ್ ಗುರೂಜಿಯನ್ನು ಪರಿಚಯ ಮಾಡಿಕೊಟ್ಟಿದ್ದ. ತೇಜಸ್ ಅವರನ್ನು ಪರೀಕ್ಷಿಸಿದ್ದ ವಿಜಯ್, ಯಶವಂತಪುರದ ವಿಜಯಲಕ್ಷ್ಮಿ ಆಯುರ್ವೇದ ಔಷಧ ಅಂಗಡಿಯಲ್ಲಿ 'ದೇವರಾಜ್ ಬೂಟಿ' ಹೆಸರಿನ ಔಷಧ ಖರೀದಿಸಿ ಸೇವಿಸಬೇಕು. ಅದರ ಬೆಲೆ ಗ್ರಾಂಗೆ 1.60 ಲಕ್ಷ ಇದ್ದು, ಆ ಔಷಧ ಬೇರೆ ಕಡೆ ಸಿಗುವುದಿಲ್ಲ. ಅದನ್ನು ಹರಿದ್ವಾರದಿಂದ ತರಿಸಲಾಗಿದೆ. ನಗದು ಪಾವತಿಸಿ ಆ ಔಷಧ ಖರೀದಿಸಬೇಕು. ಅದರ ಖರೀದಿಗೆ ಯಾರನ್ನೂ ಜತೆಯಲ್ಲಿ ಕರೆದುಕೊಂಡು ಹೋಗಬಾರದು. ಬೇರೆ ವ್ಯಕ್ತಿಯನ್ನು ಜತೆಯಲ್ಲಿ ಕರೆದೊಯ್ದರೆ ಆ ಔಷಧಿಗೆ ಶಕ್ತಿ ಫಲಿಸುವುದಿಲ್ಲ ಎಂಬುದಾಗಿ ಷರತ್ತು ಹಾಕಿದ್ದ.
ಗುರೂಜಿ ಸಲಹೆಯಂತೆ ತೇಜಸ್ ಹಲವು ಬಾರಿ 'ದೇವರಾಜ್ ಬೂಟಿ' ಮತ್ತು 'ಭವನ ಬೂಟಿ' ತೈಲ ಖರೀದಿಸಿದ್ದರು. ಬೇರೆ ಬೇರೆ ಔಷಧಗಳು ಹಾಗೂ ತೈಲಗಳ ಹೆಸರಿನಲ್ಲಿ ತೇಜಸ್ ಅವರಿಂದ ಹಂತ ಹಂತವಾಗಿ 48 ಲಕ್ಷ ರೂಪಾಯಿ ವಸೂಲು ಮಾಡಲಾಗಿದೆ. ಬ್ಯಾಂಕ್ ಹಾಗೂ ಸ್ನೇಹಿತರಿಂದ ಸಾಲ ಪಡೆದು ಔಷಧಗಳನ್ನು ಖರೀದಿಸಿದ್ದರು. ಆದರೂ ಸಮಸ್ಯೆ ಪರಿಹಾರವಾಗದೇ ಇದ್ದಾಗ ಆರೋಪಿ ಗುರೂಜಿ, ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ. ಚಿಕಿತ್ಸೆ ಮುಂದುವರಿಸದಿದ್ದರೆ ಹೆಚ್ಚಿನ ಸಮಸ್ಯೆಯಾಗಿ ಜೀವಕ್ಕೆ ತೊಂದರೆ ಆಗಬಹುದು ಎಂಬುದಾಗಿ ಹೆದರಿಸಿ ಮತ್ತೆ ಹಣ ಪೀಕಲು ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ
Bengaluru police have arrested a fraudster posing as an Ayurvedic guru who duped the public by promising cures for sexual health issues. The accused, Vijay Guruji, along with an associate from “Vijayalakshmi Ayurvedic Shop,” allegedly cheated software engineer Tejas of ₹48 lakh by selling so-called miracle medicines like “Devaraj Booti” and “Bhavan Booti,” claiming they were rare, powerful, and sourced from Haridwar.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am