ಬ್ರೇಕಿಂಗ್ ನ್ಯೂಸ್
04-12-25 11:15 pm Mangalore Correspondent ಕ್ರೈಂ
ಮಂಗಳೂರು, ಡಿ.4 : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಮಸಕಟ್ಟೆ ನಿವಾಸಿಗಳಾದ ವೃದ್ಧ ದಂಪತಿ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಬಿದ್ದು ತಮ್ಮ ಖಾತೆಯಲ್ಲಿದ್ದ 84 ಲಕ್ಷವನ್ನು ಸೈಬರ್ ವಂಚಕರಿಗೆ ನೀಡಲು ಹೋಗಿ ಬ್ಯಾಂಕ್ ಮ್ಯಾನೇಜರ್ ಒಬ್ಬರ ಸಮಯ ಪ್ರಜ್ಞೆಯಿಂದ ಹಣ ಉಳಿಸಿಕೊಂಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಬೆನೆಡಿಕ್ಟ್ ಪೆರ್ನಾಂಡಿಸ್ (84) ಹಾಗೂ ಪತ್ನಿ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿ.1 ರಂದು ಯಾರೋ ಅಪರಿಚಿತರು ಕರೆ ಮಾಡಿ ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂದು ಪರಿಚಯ ಹೇಳಿದ್ದರು. ಬಳಿಕ ಪೊಲೀಸರ ಸೋಗಿನಲ್ಲಿ ವಾಟ್ಸ್ ಅಪ್ ಮೂಲಕ ಸಂಪರ್ಕಿಸಿ, ನೀವು 6 ಕೋಟಿ ಮೋಸ ಮಾಡಿದ್ದಾಗಿ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿದ್ದಲ್ಲದೆ, ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಹೇಳಿದ್ದಾರೆ.
ಇದಲ್ಲದೆ, ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ಆರ್ ಬಿಐಗೆ ನೀಡಬೇಕೆಂದು ಸೂಚಿಸಿದ್ದು ಇದರಂತೆ ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಬಾಬ್ತು ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ತೆರಳಿದ್ದರು. ಈ ವೇಳೆ, ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಯಾಕೆ ವರ್ಗಾವಣೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಆದರೆ ವೃದ್ಧ ದಂಪತಿ ಸರಿಯಾದ ಉತ್ತರ ನೀಡದ ಕಾರಣ ಸಂಶಯಗೊಂಡ ಮ್ಯಾನೇಜರ್, ಸೈಬರ್ ವಂಚಕರು ಒದಗಿಸಿದ ಖಾತೆಗೆ ಹಣವನ್ನು ವರ್ಗಾವಣೆ ಮಾಡದೇ, ಕಿನ್ನಿಗೋಳಿ ಪರಿಸರದ ಮುಲ್ಕಿ ಠಾಣೆಯ ಬೀಟ್ ಸಿಬ್ಬಂದಿ ಯಶವಂತ ಕುಮಾರ್ ಹಾಗೂ ಠಾಣಾ ಗುಪ್ತವಾರ್ತೆ ಸಿಬ್ಬಂದಿ ಕಿಶೋರ್ ಅವರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಮುಲ್ಕಿ ಪೊಲೀಸರು ವೃದ್ಧ ದಂಪತಿಯ ಮನೆಗೆ ತೆರಳಿ ಅವರ ಮೊಬೈಲ್ ಪರಿಶೀಲಿಸಿದ್ದು ಈ ಸಮಯ ಅವರು ಡಿಜಿಟಲ್ ಅರೆಸ್ಟ್ ಒಳಗಾಗಿರುವುದು ಕಂಡುಬಂದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗಳು ಬ್ಯಾಂಕ್ ಮ್ಯಾನೇಜರ್ ಗೆ ಕರೆ ಮಾಡಿ ವಿಚಾರ ತಿಳಿಸಿದ್ದು ಹಣ ವರ್ಗಾವಣೆ ಮಾಡದಂತೆ ಸೂಚಿಸಿದ್ದರು. ಅಲ್ಲದೆ, ವೃದ್ದ ದಂಪತಿಗೆ ತಿಳುವಳಿಕೆ ನೀಡಿ, ದೊಡ್ಡ ಮೊತ್ತದ ಹಣವನ್ನು ಉಳಿಸಿರುತ್ತಾರೆ. ಇದರ ಬಗ್ಗೆ ಮುಲ್ಕಿ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುತ್ತಾರೆ.
An elderly couple from Damasakatte in Mulki narrowly escaped losing ₹84 lakh to cybercriminals after falling victim to a sophisticated ‘digital arrest’ scam. The scammers, posing as CID officers from Uttar Pradesh, contacted 84-year-old Benedict Fernandes and his wife, 71-year-old Lilly Cecily, alleging their involvement in a ₹6 crore fraud case.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm