ಬ್ರೇಕಿಂಗ್ ನ್ಯೂಸ್
06-12-25 09:52 pm Mangalore Correspondent ಕ್ರೈಂ
ಮಂಗಳೂರು, ಡಿ.6 : ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಐವರು ಡ್ರಗ್ ಪೆಡ್ಲರ್ ಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 14 ವರ್ಷಗಳ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಸುಡಾನ್ ಮೂಲದ ಪ್ರಜೆ, ಬೆಂಗಳೂರು ಗುಂಟೂರು ಪಾಳ್ಯದಲ್ಲಿ ನೆಲೆಸಿದ್ದ ಲೂವಾ ಡೇನಿಯಲ್ ಜಸ್ಟಿನ್ ಬೌಲೋಗೆ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಮಹಮ್ಮದ್ ರಮೀಜ್ ಗೆ 14 ವರ್ಷಗಳ ಕಠಿಣ ಶಿಕ್ಷೆ ಮತ್ತು 1.45 ಲಕ್ಷ ದಂಡ ವಿಧಿಸಲಾಗಿದೆ. ಕಾಸರಗೋಡು ಮಂಜಿಲ್ ಕುನ್ನಿಲ್ ನಿವಾಸಿ ಮೊಯಿದೀನ್ ರಶೀದ್ ಗೆ 12 ವರ್ಷಗಳ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ. ಉಪ್ಪಳ ನಿವಾಸಿ ಅಬ್ದುಲ್ ರವೂಫ್ ಗೆ 13 ವರ್ಷ ಕಠಿಣ ಶಿಕ್ಷೆ ಮತ್ತು 1.35 ಲಕ್ಷ ದಂಡ ವಿಧಿಸಿದೆ. ಇವರಿಗೆ ಸಹಕಾರ ನೀಡುತ್ತಿದ್ದ ಬೆಂಗಳೂರು ಮಡಿವಾಳ ನಿವಾಸಿ ಸಬಿತಾ ಅಲಿಯಾಸ್ ಚಿಂಚುಗೆ 12 ವರ್ಷ ಶಿಕ್ಷೆ ಮತ್ತು 1.25 ಲಕ್ಷ ದಂಡ ವಿಧಿಸಿದೆ.


2022ರ ಜೂನ್ 14ರಂದು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ, ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದರು. ಈ ವೇಳೆ, 125 ಗ್ರಾಮ್ ಎಂಡಿಎಂಎ ವಶಕ್ಕೆ ಪಡೆಯಲಾಗಿತ್ತು. ಈ ಬಗ್ಗೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಾಗಿತ್ತು. ಒಂದೂವರೆ ವರ್ಷಗಳಿಂದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳ ಆರೋಪ ಸಾಬೀತಾಗಿದೆ ಎಂದು ಹೇಳಿದ್ದು ಇದೀಗ ಶಿಕ್ಷೆ ಪ್ರಮಾಣವನ್ನು ಘೋಷಿಸಿದೆ. ಎನ್ಡಿಪಿಎಸ್ ಸ್ಪೆಷಲ್ ಕೋರ್ಟಿನಲ್ಲಿ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಜುಡಿತ್ ಮಸ್ಕರೇನಸ್ ವಾದಿಸಿದ್ದರು.
The Principal District and Sessions Court in Mangaluru has sentenced five drug peddlers to 12–14 years of rigorous imprisonment along with heavy fines for supplying MDMA to students. The accused had been arrested two years ago during a crackdown by the Mangaluru CCB.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm