ಬ್ರೇಕಿಂಗ್ ನ್ಯೂಸ್
11-12-25 07:49 pm Bangalore Correspondent ಕ್ರೈಂ
ಬೆಂಗಳೂರು, ಡಿ 11 : ವಂಚಕರ ಬೆದರಿಕೆಗೆ ಬೇಸತ್ತ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ಮೋಹನ್ (25) ಮೃತ ವಿದ್ಯಾರ್ಥಿ.
ನಗರದ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಜಗನ್ಮೋಹನ್ ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ಬಾಡಿಗೆ ರೂಮ್ನಲ್ಲಿ ವಾಸವಿದ್ದ.
ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಮೂರು ನಂಬರ್ಗಳನ್ನು ಬರೆದಿರುವುದು ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ನಕಲಿ ವಿಡಿಯೋ ಕಾಲ್ನಲ್ಲಿ 25 ಸಾವಿರ ರೂಪಾಯಿ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಯುವಕನ ಫೋಟೋ ನಗ್ನವಾಗಿ ಎಡಿಟ್ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ಕೊಡದಿದ್ದರೆ ವಿಡಿಯೋ, ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ವಂಚಕರ ಬೆದರಿಕೆಗೆ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
A 25-year-old MBA student died by suicide in Shantinagar near Hesaraghatta Road after allegedly being blackmailed by online fraudsters who threatened to leak his intimate photos. The deceased has been identified as Jagan Mohan, a native of Kerala.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am