ಬ್ರೇಕಿಂಗ್ ನ್ಯೂಸ್
13-12-25 12:51 pm HK News Desk ಕ್ರೈಂ
ಶಿವಮೊಗ್ಗ, ಡಿ.13: ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ವ್ಯಕ್ತಿಯೊಬ್ಬ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಜೈ ಭೀಮ್ ನಗರದ ಕಿರಣ್(25) ಹಾಗೂ ಪೌರ ಕಾರ್ಮಿಕ ಮಂಜುನಾಥ್(45) ಕೊಲೆಯಾದ ದುರ್ದೈವಿಗಳು. ಘಟನೆ ಕುರಿತು ಸಂಜಯ್, ಶಶಿ, ವೆಂಕಟೇಶ್, ಭರತ್ ಹಾಗೂ ಸುರೇಶ್ ಸೇರಿ ಐವರನ್ನು ಬಂಧಿಸಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೈ ಭೀಮ್ ನಗರದ ಪ್ರೇಮಿಗಳಿಬ್ಬರು ಮೊನ್ನೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಹುಡುಗ ಮತ್ತು ಹುಡುಗಿಯ ಎರಡೂ ಕಡೆಯ ಕುಟುಂಬದವರು ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ನಿನ್ನೆ ಸಂಜೆ ಪ್ರೇಮಿಗಳಿಬ್ಬರು ತಮಗೆ ಜೀವ ಬೆದರಿಕೆ ಇದೆ ಎಂದು ಹಳೇ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಆಗ ಜೈ ಭೀಮ್ ನಗರದ ಕಿರಣ್, ಮಂಜುನಾಥ್ ಸೇರಿ ಹಲವರು ಪೊಲೀಸ್ ಠಾಣೆಗೆ ಬಂದು ಪ್ರೇಮಿಗಳಿಬ್ಬರ ಬಳಿ ಮಾತನಾಡುವಾಗ ಹುಡುಗಿಯ ಸಹೋದರ ಬಂದು ನನ್ನ ತಂಗಿಯ ಪ್ರೇಮಕ್ಕೆ ನೀವೆಲ್ಲಾ ಬೆಂಬಲ ನೀಡಿದ್ದೀರಿ ಎಂದು ಠಾಣೆಯಲ್ಲೇ ಗಲಾಟೆ ಮಾಡಿದ್ದಾನೆ. ಪೊಲೀಸರು ಗಲಾಟೆ ತಡೆದು ಮನೆಗೆ ಕಳುಹಿಸಿದ್ದರು. ಅಷ್ಟಕ್ಕೆ ಸುಮ್ಮನಾಗದ ಹುಡುಗಿಯ ಸಹೋದರ, ರಾತ್ರಿ ಕಿರಣ್, ಮಂಜುನಾಥ್ ಮನೆಯ ಬಳಿ ಬಂದು ಕಿರಿಕ್ ತೆಗೆದಿದ್ದಾನೆ.
ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ನನ್ನ ತಂಗಿ ತನ್ನ ಪ್ರೇಮಿಯ ಜೊತೆ ಓಡಿ ಹೋಗಲು ನೀವೇ ಮುಖ್ಯ ಕಾರಣ ಎಂದು ತಾನು ತಂದಿದ್ದ ಚಾಕುವಿನಿಂದ ಕಿರಣ್ ಹಾಗೂ ಮಂಜುನಾಥನಿಗೆ ಇರಿದು ಕೊಂದು ಸ್ಥಳದಿಂದ ಪರಾರಿಯಾಗಿದ್ಧಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪೌರ ಕಾರ್ಮಿಕ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟರೆ, ಕಿರಣ್ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.
ಪ್ರಕರಣ ಸಂಬಂಧ ಹಳೇ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಐವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು, ಅವರನ್ನು ಬಂಧಿಸುವಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
A shocking double murder was reported in Bhadravati town of Shivamogga district, where two men were stabbed to death following a dispute linked to a love affair. Police have arrested five accused in connection with the crime.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm