ಬ್ರೇಕಿಂಗ್ ನ್ಯೂಸ್
07-01-26 10:45 pm Bangalore Correspondent ಕ್ರೈಂ
ಬೆಂಗಳೂರು, ಜ 07 : ಪೋಷಕರ ಜತೆಗೆ ನೆಲಸಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ನಾಗರದ ವೈಟ್‌ಫೀಲ್ಡ್ ಬಳಿ ನಡೆದಿದೆ.
ಪಶ್ಚಿಮ ಬಂಗಾಳದ ಇಂಜಮುಲ್ ಶೇಖ್ ಅವರ ಪುತ್ರಿ ಶಹನಾಜ್ ಖಾತುನ್ ಕೊಲೆಯಾದವಳು. ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಇಂಜಮುಲ್ ಶೇಖ್ ಕುಟುಂಬವು ನಲ್ಲೂರುಹಳ್ಳಿ ಸುತ್ತಮುತ್ತ ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಎದುರು ಬಾಲಕಿ ಆಟವಾಡುತ್ತಿದ್ದಳು. ಆಗ ಅಪಹರಣ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಠಾಣೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾಗ ದೇವಸ್ಥಾನದ ಪಕ್ಕದ ಕಾಲುವೆಯಲ್ಲಿ ಅದೇ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ.
ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ಪತ್ತೆಗೆ ಮೂರು ವಿಷೇಶ ತಂಡ ರಚಿಸಲಾಗಿದೆ. ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಪ್ಲಾಸ್ಟಿಕ್ ಹಗ್ಗ ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದರು.
ಪಕ್ಕದ ಮನೆಯ ನಿವಾಸಿಯ ಜತೆಗೆ ಬಾಲಕಿಯ ತಾಯಿ ಇತ್ತೀಚೆಗೆ ಜಗಳವಾಡಿದ್ದರು. ಅದೇ ಸಿಟ್ಟಿನಿಂದ ಆ ವ್ಯಕ್ತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು
A heartbreaking incident has been reported near Whitefield, where a 6-year-old girl was kidnapped and murdered, allegedly as an act of revenge following a quarrel involving her mother. The accused stuffed the child’s body in a plastic bag and dumped it in a drain.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm