ಬ್ರೇಕಿಂಗ್ ನ್ಯೂಸ್
23-01-26 09:36 pm Mangaluru Staffer ಕ್ರೈಂ
ಮಂಗಳೂರು, ಜ.23: ಬೈಕ್ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ನಡೆದಿದೆ. ಜ.20 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಂಗಳೂರಿನ ಕುಳೂರು ನಿವಾಸಿ ಮೊಯಿದ್ದೀನ್ ನಾಸೀರ್ ಹಾಗೂ ಅಬ್ದುಲ್ ಸಮದ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ಮರೋಡಿ ಗ್ರಾಮದ ನಿವಾಸಿ ದೇವಿಪ್ರಸಾದ್ ಎಂಬವರ ಬೈಕನ್ನು ಕದ್ದು ಪರಾರಿಯಾಗುತ್ತಿದ್ದ ಸಂದರ್ಭ ಆರೋಪಿಗಳನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ. ಈ ವೇಳೆ, ಆರೋಪಿಗಳು ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದರೆಂದು ಸ್ಥಳೀಯರು ಸೇರಿ ಇಬ್ಬರನ್ನೂ ಥಳಿಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ.
ವಿಷಯ ತಿಳಿದು ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಯತ್ನ ವಿಚಾರದಲ್ಲಿ ಅಬ್ದುಲ್ ಸಮದ್ ಮತ್ತು ಮೊಯಿದ್ದೀನ್ ವಿರುದ್ದ BNS ಕಲಂ 303(2), 307 ಅಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ಇವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಹಲ್ಲೆ ನಡೆಸಿದ ಆರೋಪದಲ್ಲಿ ಸ್ಥಳೀಯರಾದ ಬಾಚು, ನಿಶಿತ್, ನರೇಶ್ ಅಂಚನ್, ರತ್ನಾಕರ, ಸ್ವಸ್ತಿಕ್, ದೇವಿಪ್ರಸಾದ್, ಸುಧೀರ್, ಚಂದಪ್ಪ ಎಂಬವರ ವಿರುದ್ದ BNS ಕಾಯಿದೆ ಕಲಂ 189(2), 191(2), 191(3), 352, 115(2), 118(1), 351(2) ,190 ಅಡಿ ಪ್ರಕರಣ ದಾಖಲಿಸಲಾಗಿದೆ.
In a disturbing incident of mob violence, two men accused of attempting to steal a motorcycle were tied to a tree and assaulted by locals at Palaragoli in Marodi village of Belthangady taluk. The incident occurred late on the night of January 20 and came to light later.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm