ಬ್ರೇಕಿಂಗ್ ನ್ಯೂಸ್
09-02-26 11:26 am Mangalore Correspondent ಕ್ರೈಂ
ಮಂಗಳೂರು, ಫೆ.9 : ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮೂವರು ಯುವಕರು ಅಪಹರಿಸಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿ ನಡೆದಿದೆ.
ಮಾರುತಿ ಓಮ್ನಿ ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಸ್ಕೂಟರ್ ನಲ್ಲಿ ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಡ್ಡಗಟ್ಟಿ ಕಾರಿನ ಒಳಗೆಳೆದು ಕಿಡ್ನಾಪ್ ಮಾಡಲು ಯತ್ನಿಸಿದ್ದಾರೆ. 16 ವರ್ಷದ ಬಾಲಕಿ ಕಾಶಿಬೆಟ್ಟು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಸುಮಾರು 8:30ಕ್ಕೆ ಸ್ಕೂಟರ್ ಇಟ್ಟು ಸಂತೆಕಟ್ಟೆಯಲ್ಲಿ ಬಸ್ ಹತ್ತಲು ತೆರಳುವಾಗ ಕಾರಿನಲ್ಲಿ ಬಂದವರು ತಡೆದು ನಿಲ್ಲಿಸಿದ್ದಾರೆ.
ಕಾರಿನ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ್ದು ಅದರಲ್ಲಿ ಮೂವರು ದುಷ್ಕರ್ಮಿಗಳು ಕೂಡ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದರೆಂದು ತಿಳಿದುಬಂದಿದೆ. ಬಾಲಕಿಯನ್ನು ಕಾರಿನ ಒಳಗೆ ಎಳೆಯಲು ಯತ್ನಿಸಿದಾಗ, ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ್ದಾಳೆ. ಇದೇ ವೇಳೆ, ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಯುವತಿಯ ಕೈಗೆ ಮತ್ತು ಬೆರಳಿಗೆ ಚೂರಿಯಿಂದ ಚುಚ್ಚಿದ ಗಾಯವಾಗಿದ್ದು ಕಾಲೇಜು ಬ್ಯಾಗ್ ನೊಂದಿಗೆ ಯುವಕರು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
A 16-year-old college student narrowly escaped a kidnap attempt in Belthangady after three unidentified men in a car tried to force her inside. The girl resisted and raised an alarm, prompting the accused to flee. She sustained minor injuries and is undergoing treatment, while police have launched an investigation.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm