ಬ್ರೇಕಿಂಗ್ ನ್ಯೂಸ್
13-02-26 12:54 am HK News Desk ಕ್ರೈಂ
ಬೆಂಗಳೂರು, ಫೆ 12: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ ನನ್ನ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಗುರುವಾರ ರಾತ್ರಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಅಹಮದಾಬಾದ್ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ನನ್ನ ಟರ್ಮಿನಲ್ ಒಳಗಡೆಯೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಪೊಲೀಸರು ಭೈರತಿ ನನ್ನ ಏರ್ಪೋರ್ಟ್ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಏನಿದು ಪ್ರಕರಣ?
ಕಳೆದ ವರ್ಷ ಜುಲೈನಲ್ಲಿ ಭಾರತಿ ನಗರದಲ್ಲಿ ಬಿಕ್ಲು ಶಿವನನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಎಫ್ಐಆರ್ನಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ನನ್ನ ಐದನೇ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಗ್ಯಾಂಗ್ಸ್ಟರ್ ಜಗದೀಶ್ ಪದ್ಮನಾಭ ಅಲಿಯಾಸ್ ಜಗ(45)ನನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ.
ಕಳೆದ ಮಂಗಳವಾರ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ ವಜಾಗೊಳಿಸಿತ್ತು. ಬಳಿಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬಳಿಕ ಅವರನ್ನ ಬಂಧಿಸಲು ಸಿಬಿಐ ಹುಡುಕಾಟ ನಡೆಸುತಿತ್ತು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm