ಬ್ರೇಕಿಂಗ್ ನ್ಯೂಸ್
13-02-26 03:35 pm Mangalore Correspondent ಕ್ರೈಂ
ಮಂಗಳೂರು, ಫೆ.13: ಬೆಂಗಳೂರು ನಗರದಿಂದ ಎಂಡಿಎಂಎ ಡ್ರಗ್ಸ್ ಖರೀದಿಸಿ ತಂದು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 118 ಗ್ರಾಮ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಫೆ.12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿದ್ದಾರೆ.
ಉಳ್ಳಾಲ ಬಸ್ತಿ ಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ(34), ಉಳ್ಳಾಲ ಕೋಡಿ ನಿವಾಸಿ ಮೈಯದ್ದಿ (28), ಮುಕ್ಕಚೇರಿಯ ಮೊಹಮ್ಮದ್ ಶಿಫಾನ್ (28) ಬಂಧಿತರು. ಆರೋಪಿಗಳ ವಶದಿಂದ ರೂ.11,90,000 ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನಂಬ್ರದ ಬೂದು ಬಣ್ಣದ ಸ್ವಿಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
The City Crime Branch (CCB) police of Mangaluru have arrested three individuals for allegedly procuring banned narcotic substance MDMA from Bengaluru and attempting to sell it to the public and students in the city. Acting on credible information, the CCB team learned that the accused had transported MDMA from Bengaluru to Mangaluru in a grey Maruti Swift car and were selling it in the Talapady area of Ullal taluk. Based on the tip-off, the police conducted a targeted operation on February 12, 2026, and intercepted the vehicle while the accused were allegedly in possession of the narcotic substance for sale.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am