ಬ್ರೇಕಿಂಗ್ ನ್ಯೂಸ್
24-02-26 01:34 pm HK News Desk ಕ್ರೈಂ
ಶಿವಮೊಗ್ಗ, ಫೆ 25: ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಸಂಕೇತ್ ಎಂಬ ವಿದ್ಯಾರ್ಥಿ ಸಹಪಾಠಿಗಳ ಹಲ್ಲೆಗೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ರಾತ್ರಿ ನಡೆದಿದೆ. ಈ ಘಟನೆ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗಳ ನಡುವೆ ಗಲಾಟೆ ಉಂಟಾಗಿದೆ. ಗಿರೀಶ್ ಎಂಬ ವಿದ್ಯಾರ್ಥಿಯ ಮೇಲೆ ಮೂವರು ವಿದ್ಯಾರ್ಥಿಗಳು ಹಲ್ಲೆ ನಡೆಸುತ್ತಿದ್ದ ವೇಳೆ, ಸಹಾಯಕ್ಕೆ ತೆರಳಿದ ಸಂಕೇತ್ ಮೇಲೆಯೇ ಹಲ್ಲೆ ಮಾಡಿದ್ದಾರೆ. ಹಲ್ಲೆಯ ತೀವ್ರತೆಗೆ ಸಂಕೇತ್ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಪ್ರಕರಣವು ಕೋಮು ಉದ್ವಿಗ್ನತೆಯ ರೂಪ ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ತುಂಗಾನಗರ ಠಾಣಾ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾಹಿತಿ ಪಡೆದುಕೊಂಡಿದ್ದಾರೆ.
ಶಾಲೆಯಿಂದ ಹೊರಬಂದ ನಂತರ ಮೈದಾನಕ್ಕೆ ಕರೆದುಕೊಂಡು ಹೋಗಿ ಕೆಲವರು ಹಲ್ಲೆ ನಡೆಸಿದರು. “ನನಗೆ ಹೊಡೆತ ಬಿದ್ದ ತಕ್ಷಣ ಪ್ರಜ್ಞೆ ತಪ್ಪಿದಂತಾಯಿತು. ನಂತರ ಸಂಕೇತ್ ಕೆಳಗೆ ಬಿದ್ದಿರುವುದನ್ನು ನೋಡಿ ಶಿಕ್ಷಕರನ್ನು ಕರೆದುಕೊಂಡು ಬಂದೆವು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು,” ಎಂದು ಸಂಕೇತ್ ಸ್ನೇಹಿತ ಗಿರೀಶ್ ತಿಳಿಸಿದ್ದಾನೆ.
“ನನ್ನ ಮೊಮ್ಮಗ ಯಾರಿಗೂ ತೊಂದರೆ ಮಾಡದ ಮಗು. ಶಾಲೆಯಿಂದ ಹತ್ತಿರದಲ್ಲೇ ಮನೆ ಇದ್ದುದರಿಂದ ಸ್ವತಃ ಬರುತ್ತಿದ್ದ. ರಾತ್ರಿ 9 ಗಂಟೆಯಾದರೂ ಮನೆಗೆ ಬರದಿದ್ದಾಗ ಆತಂಕವಾಯಿತು. ಕೆಲವರು ಬಂದು ಹೊಡೆದಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋದರು. ಸಂಪೂರ್ಣ ತನಿಖೆ ನಡೆಯಬೇಕು, ನಮಗೆ ನ್ಯಾಯ ಸಿಗಬೇಕು,” ಎಂದು ಸಂಕೇತ್ ಅಜ್ಜ ಹನುಮಂತಪ್ಪ ಆಗ್ರಹಿಸಿದ್ದಾರೆ.
ಇನ್ನೂ ಘಟನೆ ಬಗ್ಗೆ ಮಾತನಾಡಿದ ಸಂಕೇತ್ ತಂದೆ ಕುಮಾರ್, “ನನ್ನ ಮಗ ಜಗಳ ಮಾಡುವವನು ಅಲ್ಲ. ಶಾಲೆ ಮತ್ತು ಮನೆ ಇಷ್ಟೇ ಅವನ ಜಗತ್ತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು,” ಎಂದು ಕಣ್ಣೀರಿಟ್ಟಿದ್ದಾರೆ.
ಸ್ಥಳೀಯರ ಆರೋಪ;
ಸೂಳೆಬೈಲು ಪ್ರದೇಶದಲ್ಲಿ ರಾತ್ರಿ ವೇಳೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಗಸ್ತು ಹೆಚ್ಚಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. “ನಿರ್ಜನ ಪ್ರದೇಶದಲ್ಲಿ ನಿಯಂತ್ರಣದ ಕೊರತೆ ಇದೆ. ಪೊಲೀಸರ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ನಡೆಯುತ್ತಿವೆ,” ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯ ಶಿವರಾಮ್ ಪ್ರತಿಕ್ರಿಯಿಸಿ, “SSLC ಪೂರ್ವಸಿದ್ಧತಾ ಪರೀಕ್ಷೆಗಳ ಹಿನ್ನೆಲೆ ಪೋಷಕರ ಒಪ್ಪಿಗೆ ಮೇರೆಗೆ ರಾತ್ರಿ 9:30ರವರೆಗೆ ಕ್ಲಾಸ್ ನಡೆಸಲಾಗುತ್ತಿತ್ತು. ಶಾಲೆಯ ಆವರಣದ ಹೊರಗೆ ಈ ಘಟನೆ ನಡೆದಿದೆ,” ಎಂದಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಹಾಗೂ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಸಂಕೇತ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಶಿವಮೊಗ್ಗ ನಗರವೇ ದುಃಖದ ವಾತಾವರಣದಲ್ಲಿ ಮುಳುಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm