ಬ್ರೇಕಿಂಗ್ ನ್ಯೂಸ್
24-02-26 01:50 pm HK News Desk ಕ್ರೈಂ
ಲಕ್ನೋ, ಫೆ 25: ನಗರದ ಆಶಿಯಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣೆಯಾದರೆಂದು ದೂರು ನೀಡಿದ್ದ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನೀರು ತುಂಬಿಸುವ ಡ್ರಮ್ ಒಳಗೆ ಪತ್ತೆಯಾದ ಶಿರಚ್ಛೇದಿತ ಅರ್ಧ ದೇಹ ನೋಡಿ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ವರ್ಧಮಾನ ಪ್ಯಾಥಾಲಜಿ ಮಾಲೀಕ ಮನ್ವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20ರಿಂದ ಮನ್ವೇಂದ್ರ ಸಿಂಗ್ ಕಾಣೆಯಾಗಿದ್ದಾರೆ ಎಂದು ಪುತ್ರ ಅಕ್ಷತ್ ಪೊಲೀಸರಿಗೆ ದೂರು ನೀಡಿದ್ದ. ಆದರೆ ಘಟನೆ ನಡೆದ ಎರಡೇ ದಿನಗಳಲ್ಲಿ ಪ್ರಕರಣ ತೀವ್ರ ತಿರುವು ಪಡೆದುಕೊಂಡಿತ್ತು.
ಅಕ್ಷತ್ ಮೊದಲಿಗೆ, “ತಂದೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಮರುದಿನ ವಾಪಸ್ ಬರುತ್ತೇನೆ ಎಂದರೂ ಬಂದಿಲ್ಲ. ಅವರ ಮೂರು ಮೊಬೈಲ್‌ಗಳು ಸ್ವಿಚ್ ಆಫ್ ಆಗಿವೆ,” ಎಂದು ಹೇಳಿದ್ದ. ಫೋನ್ ಕೊನೆಯ ಲೊಕೇಶನ್ ಕಾಕೋರಿ ಪ್ರದೇಶದಲ್ಲಿ ಪತ್ತೆಯಾದರೂ ಮೊಬೈಲ್ ಸಿಕ್ಕಿರಲಿಲ್ಲ. ಅನುಮಾನಗೊಂಡ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದಾಗ, ಪಾಪಿ ಮಗ ಸತ್ಯ ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4:30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಉಂಟಾಗಿದ್ದು, ಪರವಾನಗಿ ಪಡೆದ ಬಂದೂಕಿನಿಂದ ತಂದೆಯ ತಲೆಗೆ ಗುಂಡು ಹಾರಿಸಿದ್ದಾಗಿ ಅಕ್ಷತ್ ಒಪ್ಪಿಕೊಂಡಿದ್ದಾನೆ. ಗುಂಡು ತಾಗುತ್ತಿದ್ದಂತೆ ಮನ್ವೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಶವವನ್ನು ಮೂರನೇ ಮಹಡಿಯಿಂದ ಕೆಳಗೆ ತಂದು ಕತ್ತರಿಸಿ, ಕೆಲವು ಭಾಗಗಳನ್ನು ಕಾರಿನಲ್ಲಿ ತೆಗೆದುಕೊಂಡು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗವನ್ನು ಮನೆಯಲ್ಲೇ ನೀಲಿ ಡ್ರಮ್‌ನಲ್ಲಿ ಮುಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣವೇನು?
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ತಂದೆ ಒತ್ತಡ ಹೇರಿದ್ದರಿಂದ ಕೋಪಗೊಂಡ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಕ್ಷತ್‌ನ ತಂಗಿ ಈ ಘಟನೆಗೆ ಸಾಕ್ಷಿಯಾಗಿದ್ದರೂ, ಬೆದರಿಕೆ ಹಿನ್ನೆಲೆಯಲ್ಲಿ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎನ್ನಲಾಗಿದೆ. ಸಾಕ್ಷ್ಯ ನಾಶಗೊಳಿಸಲು ಕಾರನ್ನು ಸ್ವಚ್ಛಗೊಳಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮನ್ವೇಂದ್ರ ಸಿಂಗ್ ಮೂಲತಃ ಜಲೌನ್ ಮೂಲದವರು. ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿಕಾಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪೊಲೀಸ್ ಇಲಾಖೆ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm