ಬ್ರೇಕಿಂಗ್ ನ್ಯೂಸ್
10-03-26 08:32 pm Mangaluru Staffer ಕ್ರೈಂ
ಮಂಗಳೂರು, ಮಾರ್ಚ್ 10: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತು ಲಕ್ಷ ಮೌಲ್ಯದ 201 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 9ರಂದು ಮುಂಜಾನೆ ಸುಮಾರು 3 ಗಂಟೆಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದ ಜಾಮ್‌ನಗರ -ತಿರುನಲ್ವೇಲಿ ಜಂಕ್ಷನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ರೈಲಿನ ಸಾಮಾನ್ಯ ಬೋಗಿಯ ಮೇಲಿನ ಲಗೇಜ್ ರಾಕ್‌ನಲ್ಲಿ ವಾರೀಸುದಾರರು ಇಲ್ಲದ ಮೂರು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ನೂರಾರು ಬಳಸಿದ ಮೊಬೈಲ್‌ಗಳು ಪತ್ತೆಯಾಗಿವೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಆರ್‌ಪಿಎಫ್ ಹೆಡ್ ಕಾನ್ಸ್‌ಟೇಬಲ್ ಸುಜೀಶ್ ಮತ್ತು ಕಾನ್ಸ್‌ಟೇಬಲ್ ರಾಮಕೃಷ್ಣ ಅವರು ತಪಾಸಣೆ ಕೈಗೊಂಡು ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಸಮಯದಲ್ಲಿ ನಗದು, ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟವನ್ನು ಪತ್ತೆಹಚ್ಚುವುದಕ್ಕಾಗಿ ತಪಾಸಣಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ರೈಲು ನಿಲ್ದಾಣದ ಸಿಸಿಟಿವಿ ಇನ್ನಿತರ ದೃಶ್ಯಗಳನ್ನು ಪರಿಶೀಲಿಸಿದಾಗ, ಬ್ಯಾಗ್‌ಗಳು ಪತ್ತೆಯಾದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಅಪರಾಧ ವಿಭಾಗದ ಗುಪ್ತಚರ ದಳ (CIB) ಮತ್ತು ರೈಲ್ವೆ ಪೊಲೀಸರು (GRP) ಇಬ್ಬರು ಶಂಕಿತರಿಗಾಗಿ ಶೋಧ ನಡೆಸುತ್ತಿದ್ದಾರೆ. ಮೊಬೈಲ್ ಗಳನ್ನು ಎಲ್ಲಿಗೆ, ಯಾವ ಉದ್ದೇಶಕ್ಕಾಗಿ ಒಯ್ಯಲಾಗುತ್ತಿತ್ತು, ಇದರ ಹಿಂದೆ ಯಾರಿದ್ದಾರೆ ಎನ್ನುವುದರ ಬಗ್ಗೆ ತನಿಖೆ ಆಗಬೇಕಷ್ಟೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm