ಬ್ರೇಕಿಂಗ್ ನ್ಯೂಸ್
22-03-26 09:44 pm HK News Staffer ಕ್ರೈಂ
ಬೆಂಗಳೂರು, ಮಾರ್ಚ್ 22: ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಶನಿವಾರ ತಡರಾತ್ರಿ ಲ್ಯಾಂಬೋರ್ಗಿನಿ ಕಾರಿನಲ್ಲಿ ನಡೆದ ಡ್ರಿಫ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಐಷಾರಾಮಿ ಕಾರಿನಲ್ಲಿ ಭೀಕರವಾಗಿ ಸ್ಟಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರು ನೋಟಿಸ್ ನೀಡಿದ್ದು, ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾರು ಡ್ರಿಫ್ಟಿಂಗ್ ಮಾಡಿದ್ದು ರಿಕ್ಕಿ ರೈ ಅನ್ನೋದು ಇನ್ನೂ ಪಕ್ಕಾ ಆಗಿಲ್ಲ. ಆದರೆ ಕಾರಿನ ದಾಖಲೆಗಳು ಹೇಳುವ ಪ್ರಕಾರ ಲ್ಯಾಂಬೋರ್ಗಿನಿ ರಿಕ್ಕಿ ರೈಗೆ ಸೇರಿದೆ ಎನ್ನಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಿ ಡ್ರಿಫ್ಟಿಂಗ್ ಮಾಡಿದ್ದು ಯಾರು? ಕಾರಿನಲ್ಲಿ ಯಾರು ಪ್ರಯಾಣಿಸ್ತಿದ್ದರು ಅನ್ನೋದ್ರ ಬಗ್ಗೆ ತನಿಖೆಗೆ ಮುಂದುವರೆದಿದೆ.
ಘಟನೆ ಹಿನ್ನೆಲೆ:
ಶನಿವಾರ ಮುಂಜಾನೆ ಸುಮಾರು 2 ರಿಂದ 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಅಪಾಯಕಾರಿ ರೀತಿಯಲ್ಲಿ ಡ್ರಿಫ್ಟಿಂಗ್ ಮಾಡಿದೆ. ಈ ವೇಳೆ ರಸ್ತೆಯಲ್ಲಿದ್ದ ಇತರ ವಾಹನ ಸವಾರರು ಆತಂಕಗೊಂಡಿದ್ದು ಸ್ಟಂಟ್ನ 11 ಸೆಕೆಂಡ್ಗಳ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಸಖತ್ ವೈರಲ್ ಆಗಿತ್ತು.
ವಿಡಿಯೋ ಆಧಾರದಲ್ಲಿ ಕಾರಿನ ಸಂಖ್ಯೆ ಕೆಎ 05 ಎನ್ಆರ್ 0009 ಅನ್ನು ಗುರುತಿಸಿದ ಪೊಲೀಸರು, ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಕಾರು ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸೇರಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.
ಸಾರ್ವಜನಿಕ ರಸ್ತೆಗಳಲ್ಲಿ ಈ ರೀತಿಯ ಡ್ರಿಫ್ಟಿಂಗ್, ವ್ಹೀಲಿಂಗ್ ಅಥವಾ ಅಪಾಯಕಾರಿ ಚಾಲನೆ ಸಂಚಾರ ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಕೃತ್ಯಗಳಿಗೆ ದಂಡ, ಶಿಕ್ಷೆ ಹಾಗೂ ಚಾಲನಾ ಪರವಾನಿಗೆ ರದ್ದುಪಡಿಸುವಂತಹ ಕಠಿಣ ಕ್ರಮಗಳೂ ವಿಧಿಸಲಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಹೃದಯ ಭಾಗದಲ್ಲೇ ನಡೆದ ಈ ಘಟನೆ, ರಸ್ತೆ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರ ಜೀವ ಭದ್ರತೆಗೆ ಅಪಾಯವಾಗುವ ಸ್ಟಂಟ್ಗಳ ವಿರುದ್ಧ ಕಾನೂನು ಕಠಿಣವಾಗಿ ಜಾರಿಯಾಗಬೇಕೆಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
#Bengaluru: #Lamborghini performs dangerous stunts in the middle of the road under the flyover at Anil Kumble Circle on MG Road, video goes viral. pic.twitter.com/mIexhgKUM1
— Siraj Noorani (@sirajnoorani) March 21, 2026
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm