ಬ್ರೇಕಿಂಗ್ ನ್ಯೂಸ್
03-04-26 10:53 pm HK News Staffer ಕ್ರೈಂ
ಹುಬ್ಬಳ್ಳಿ, ಎಪ್ರಿಲ್ 3 : ಜಿಮ್ ಸೆಂಟರ್ಗಳು ಇತ್ತೀಚೆಗೆ ಲವ್ ಜಿಹಾದ್ ಕೇಂದ್ರಗಳಾಗುತ್ತಿವೆ ಎಂದು ಆರೋಪಿಸಿ ಹಿಂದೂ ಪರ ಸಂಘಟನೆಗಳು ಪೊಲೀಸ್ ಠಾಣೆಯ ಮುಂದೆ ತೀವ್ರ ಪ್ರತಿಭಟನೆ ನಡೆಸಿದ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಜಿಮ್ ಟ್ರೈನರ್ ವಿಜಯನಗರ ನಿವಾಸಿ ಸಮೀರ್ ಎಂಬಾತನ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮೀರ್ ಯುವತಿಯರ ತಲೆಕೆಡಿಸಿ ‘ಲವ್ ಜಿಹಾದ್’ ನಡೆಸುತ್ತಿದ್ದಾನೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ನಂತರ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿ ಗಲಾಟೆಗೆ ಕಾರಣವಾಗಿದೆ.
ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿನ್ನೆಲೆಯಲ್ಲಿ, ಆತನ ಕುಟುಂಬ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಯುವತಿ ಮನೆಯವರು ಕೂಡ ಯುವಕನ ಮನೆಗೆ ತೆರಳಿ ವಾಗ್ವಾದ ನಡೆಸಿದ್ದಾರೆ. ಘಟನೆಯಲ್ಲಿ ಎರಡೂ ಕಡೆಯವರು ಗಾಯಗೊಂಡಿದ್ದು ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಮ್ಗಳು ಲವ್ ಜಿಹಾದ್ ಕೇಂದ್ರಗಳಾಗುತ್ತಿವೆ. ಉದ್ದೇಶ ಪೂರ್ವಕವಾಗಿಯೇ ಹಿಂದೂ ಹುಡುಗಿಯರನ್ನು ಗುರಿಯಾಗಿಸಿ ಅವರ ತಲೆ ಕೆಡಿಸಲಾಗುತ್ತಿದೆ. ಸಮೀರ್ ಈಕೆಯೊಂದಿಗೆ ಮಾತ್ರವಲ್ಲ ಇನ್ನೂ 5-6 ಹುಡುಗಿಯರ ಜೊತೆ ಆಪ್ತತೆಯಿಂದ ಇದ್ದಾನೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ವಿಡಿಯೋ, ಫೋಟೋ ಇದೆ ರಿಲೀಸ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಕ್ರಿಯಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಯುವತಿ ಮನೆಯವರು ಯುವಕನ ಮನೆಗೆ ಹೋಗಿ ತಮ್ಮ ಮನೆ ಯುವತಿ ಜೊತೆ ಓಡಾಡ್ತಿದ್ದಿಯಾ ಅಂತ ಗಲಾಟೆ ಮಾಡಿದ್ದಾರೆ. ಮತ್ತೊಂದು ಕಡೆ ಯುವಕನ ಮನೆಯವರು ಯುವತಿ ಮನೆಗೆ ಬಂದು ಗಲಾಟೆ ಮಾಡಿದ್ದಾರೆ. ಇಲ್ಲಿಯವರೆಗೆ ಎರಡೂ ಕಡೆಯವರಿಂದ ದೂರು ದಾಖಲಾಗಿಲ್ಲ. ದೂರು ದಾಖಲಾದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಮೀರ್ ಸಹೋದರಿ, ಯುವತಿ ಮತ್ತು ನನ್ನ ಸಹೋದರ ಕಳೆದ 3 ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಆಕೆ ನಮ್ಮ ಮನೆಗೆ ಬರುತ್ತಿದ್ದಳು. ಈ ಹಿಂದೆ ಇವರಿಬ್ಬರೂ ಜೊತೆಯಾಗಿ ಗೋವಾಗೆ ಹೋಗಿದ್ದರು. ಇಬ್ಬರು ಸಂಬಂಧದಲ್ಲಿರುವುದು ಆಕೆ ಮನೆಯವರಿಗೂ ತಿಳಿದಿದೆ. ಇತ್ತೀಚಿಗೆ ನಾವು ಶಾಪಿಂಗ್ ಹೋಗಿದ್ದು ಈ ವೇಳೆ ಆಕೆಯೂ ನಮ್ಮ ಜೊತೆ ಬಂದಿದ್ದಳು ಎಂದು ಹೇಳಿದ್ದಾರೆ
ಮತ್ತೊಂದೆಡೆ ಪ್ರಕರಣಕ್ಕೆ ಮತ್ತಷ್ಟು ತಿರುವು ಸಿಕ್ಕಿದ್ದು, ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ವೀಡಿಯೋ ಬಿಡುಗಡೆ ಮಾಡಿ ಗಂಭೀರ ಆರೋಪಗಳನ್ನು ಮಾಡಿದ್ದಾಳೆ. ಸಮೀರ್ ಅಕ್ಕ ತೈಸೀಮ್ ಮುಲ್ಲಾ ನನ್ನ ಸ್ನೇಹಿತೆ. ಆಕೆಯಿಂದ ಸಮೀರ್ ಪರಿಚಯವಾಗಿತ್ತು. ತೈಸೀಮ್ ಜೊತೆಗೆ ಸ್ನೇಹಿತೆಯಾಗಿ ಹಲವಾರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಬರ್ತ್ ಡೇ ಪಾರ್ಟಿ, ವಿಕೇಂಡ್ ಪಾರ್ಟಿಗೆ ಹೋಗಿದ್ದೆವು. ಸಮೀರ್ ಸಹ ಅಲ್ಲಿಗೆ ಬಂದಿದ್ದ, ಇದಾದ ಮೇಲೆ ಸಮೀರ್ ಆತ್ಮೀಯನಾದ. ಒಂದು ದಿನ ಸಮೀರ್ ಮನೆಗೆ ಕರೆದುಕೊಂಡು ಹೋಗಿ ಪಾನೀಯದಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಮಾಡಿ, ಅದರ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ.
ಸಮೀರ್ ವಿಡಿಯೋ ಮಾಡಿದ್ದು ನನಗೆ ಗೊತ್ತಿರಲಿಲ್ಲ, ವಿಡಿಯೋ ತೋರಿಸಿದ ಮೇಲೆ ನನಗೆ ಗೊತ್ತಾಯಿತು. ಆ ಮೇಲೆ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ. ಪ್ರಕರಣ ತೀವ್ರಗೊಳ್ಳುತ್ತಿದ್ದಂತೆ, ಹಿಂದೂ ಪರ ಸಂಘಟನೆಗಳು ಜಿಮ್ಗಳು ‘ಲವ್ ಜಿಹಾದ್’ ಕೇಂದ್ರಗಳಾಗುತ್ತಿವೆ ಎಂದು ಆರೋಪಿಸಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದವು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm