ಬ್ರೇಕಿಂಗ್ ನ್ಯೂಸ್
10-04-26 11:06 pm HK News Staffer ಕ್ರೈಂ
ಲಕ್ನೋ, ಎಪ್ರಿಲ್ 10: ಪ್ರಯಾಗ್ರಾಜ್ ಕುಂಭಮೇಳದಲ್ಲಿ ಮಾಲೆ ಮಾರುತ್ತಲೇ ಸೋಶಿಯಲ್ ಮೀಡಿಯಾದಿಂದಾಗಿ ರಾತ್ರೋರಾತ್ರಿ ಖ್ಯಾತಿ ಗಳಿಸಿದ್ದ ಉತ್ತರ ಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರು ಇತ್ತೀಚೆಗೆ ಕೇರಳದಲ್ಲಿ ನಟ ಫರ್ಮನ್ ಖಾನ್ ಎಂಬವರನ್ನು ಮದುವೆಯಾಗಿದ್ದರು. ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಅಂತರ್ಧರ್ಮೀಯ ವಿವಾಹ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.
ಪೊಲೀಸರ ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ವಿವಾಹಕ್ಕೆ ಸಂಬಂಧಿಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿ ಫರ್ಮಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯ ನಂತರ, ಮೊನಾಲಿಸಾ ಮದುವೆ ಸಮಯದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ದೃಢಪಟ್ಟಿದೆ. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿದವು. ಆಕೆಯ ಹೆತ್ತವರು ತಮ್ಮ ಅಪ್ರಾಪ್ತ ಮಗಳ ತಲೆಕೆಡಿಸಿ ಫರ್ಮಾನ್ ಮದುವೆಯಾಗಿದ್ದಾಗಿ ಆರೋಪಿಸಿ ದೂರನ್ನೂ ನೀಡಿದ್ದರು. ಇದನ್ನೇ ಆಧಾರವಾಗಿಟ್ಟು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ತನಿಖೆ ನಡೆಸಿತ್ತು.
ಆಸ್ಪತ್ರೆ ದಾಖಲೆಗಳ ಪ್ರಕಾರ, ಮೋನಾಲಿಸಾ ಪಾರಧಿ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಡಿಸೆಂಬರ್ 30, 2009 ರಂದು ಜನಿಸಿದ್ದಾರೆ. ಮಾರ್ಚ್ 11, 2026 ರಂದು ಮದುವೆಯಾದ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ ತುಂಬಿತ್ತು. ಕೇರಳದಲ್ಲಿ ಮದುವೆ ನೋಂದಣಿ ಮಾಡುವಾಗ ಮೊನಾಲಿಸಾ ಅವರನ್ನು ವಯಸ್ಕಳೆಂದು ತೋರಿಸಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಲಾಗಿದೆ. ಆಕೆಯನ್ನು 18 ವರ್ಷ ಮೇಲ್ಪಟ್ಟವಳೆಂದು ಬಿಂಬಿಸಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am