ಬ್ರೇಕಿಂಗ್ ನ್ಯೂಸ್
16-04-26 12:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವೃದ್ಧ ತಾಯಿಯನ್ನು ಬಹುಮಹಡಿ ಕಟ್ಟಡದ ಮೇಲಿನಿಂದ ತಳ್ಳಿ ಕೊಲೆ ಮಾಡಿರುವ ಕರುಣಾಜನಕ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್‌ನಲ್ಲಿ ಬುಧವಾರ ನಡೆದಿದೆ.
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಳಲುತ್ತಿದ್ದ ಸಾವಿತ್ರಮ್ಮ (72) ಎಂಬವರನ್ನು ನಾಲ್ಕು ವರ್ಷಗಳಿಂದ ನೋಡಿಕೊಂಡಿದ್ದ ಮಗನೇ ಬೇಸತ್ತು ಕಟ್ಟಡದಿಂದ ತಳ್ಳಿ ಕೊಲೆ ಮಾಡಿದ್ದಾನೆ. ಮಗ ವೆಂಕಟೇಶ್ (42) ನನ್ನು ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ ಅವರು ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ಹಾಸಿಗೆ ಹಿಡಿದಿದ್ದ ಅವರಿಗೆ ಮಗ ವೆಂಕಟೇಶ್ ಆರೈಕೆ ಮಾಡುತ್ತಿದ್ದ.
ಪ್ರಾಥಮಿಕ ತನಿಖೆಯ ಪ್ರಕಾರ, ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೆಂಕಟೇಶ್ ತನ್ನ ತಾಯಿಯನ್ನು ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ತಳ್ಳಿದ್ದಾನೆ. ತೀವ್ರ ರಕ್ತಸ್ರಾವದಿಂದ ಸಾವಿತ್ರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಚಾರಣೆಯ ವೇಳೆ ಆರೋಪಿ ವೆಂಕಟೇಶ್, “ತಾಯಿ ಪಡುತ್ತಿದ್ದ ದೈಹಿಕ ನೋವು ಮತ್ತು ನರಕಯಾತನೆಯನ್ನು ನೋಡಲು ಸಾಧ್ಯವಾಗದೆ, ಅವರಿಗೆ ಈ ಅವಸ್ಥೆಯಿಂದ ಮುಕ್ತಿ ನೀಡಲು ಈ ಕೃತ್ಯ ಎಸಗಿದ್ದೇನೆ” ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಆರೋಪಿ ವೆಂಕಟೇಶ್ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ ಪ್ರಕರಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm