ಬ್ರೇಕಿಂಗ್ ನ್ಯೂಸ್
16-04-26 07:35 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 16: ತಾನು 2023ನೇ ಬ್ಯಾಚ್ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳನ್ನು ಬೆದರಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ. ಬಂಧಿತ ಮಿಥುನ್ ತಾನು ರಾಷ್ಟ್ರೀಯ ಆರೋಗ್ಯ ಅಭಿಯಾನ ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ ಉನ್ನತ ಅಧಿಕಾರಿಯಾಗಿದ್ದೇನೆ ಎಂದು ನಂಬಿಸಿದ್ದ. ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರಿಗೆ, ತನ್ನನ್ನು ಐಎಎಸ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದ ಈತ, ಸ್ವತಃ ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್‌ಗಳ ಸಭೆ ನಡೆಸಿ ಎಲ್ಲರನ್ನೂ ನಂಬಿಸುವಲ್ಲಿ ಯಶಸ್ವಿಯಾಗಿದ್ದ.
ಸರ್ಜನ್ ಮೂಲಕ ಪರಿಚಯವಾದ ಶ್ರೇಯಸ್ ಬೆಂಗಳೂರಿನ ಮೆಡಿಕಲ್ ಮಾಲೀಕ ಸತೀಶ್ ಎಂಬವರಿಗೆ ಸುಮಾರು 1.8 ಕೋಟಿ ರೂಪಾಯಿ ಮೌಲ್ಯದ ಔಷಧ ಸರಬರಾಜು ಟೆಂಡರ್ ಕೊಡಿಸುವುದಾಗಿ ಮಿಥುನ್ ನಂಬಿಸಿದ್ದ. ಇದಕ್ಕಾಗಿ ಶೇ.20ರಷ್ಟು ಕಮಿಷನ್ ನೀಡಬೇಕೆಂದು ಒಪ್ಪಂದ ಮಾಡಿಕೊಂಡು, ಜಕ್ಕೂರು ಬಳಿ ಬರೋಬ್ಬರಿ 36 ಲಕ್ಷ ರೂ. ಸೇರಿದಂತೆ ಒಟ್ಟು 41 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾನೆ.
ತನ್ನ ಪ್ರಭಾವ ತೋರಿಸಲು ಬೆಂಗಳೂರಿನ ಓರ್ವ ಡಿಸಿಪಿ ಹೆಸರನ್ನು ಬಳಸಿಕೊಂಡಿದ್ದು ಅಮೃತಹಳ್ಳಿ ಪೊಲೀಸರಿಗೂ ಅನುಮಾನ ಬರುವಂತಾಗಿತ್ತು. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಬಣ್ಣ ಬಯಲಾಗಿದೆ. ತಾನು 10 ಲಕ್ಷ ಜನರಲ್ಲಿ ಪರೀಕ್ಷೆ ಬರೆದು ಪಾಸಾದ 900 ಅಧಿಕಾರಿಗಳಲ್ಲಿ ಒಬ್ಬ ಎಂದು ಸುಳ್ಳು ಹೇಳಿ ಪ್ರಭಾವಿ ಸ್ವಾಮೀಜಿಗಳನ್ನೂ ಈತ ನಂಬಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಇನ್ನೂ ಹಲವು ಆಸ್ಪತ್ರೆ ಮಾಲೀಕರಿಗೆ ಆರೋಪಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am