ಬ್ರೇಕಿಂಗ್ ನ್ಯೂಸ್
18-04-26 03:50 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನೂರಾರು ಹೆಣ್ಣು ಮಕ್ಕಳ ಲೈಂಗಿಕ ಶೋಷಣೆ ಮತ್ತು ಬ್ಲ್ಯಾಕ್ಮೇಲ್ ದಂಧೆ ನಡೆಸುತ್ತಿದ್ದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೊಹಮ್ಮದ್ ತನ್ವೀರ್ (19) ಎಂಬಾತನನ್ನು ಬಂಧಿಸಿದ್ದಾರೆ.
180 ಅಪ್ರಾಪ್ತ ಬಾಲಕಿಯರನ್ನು ಜಾಲತಾಣದಲ್ಲಿ ಸಂಪರ್ಕಿಸಿ ಅವರನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು 10 ಪೊಲೀಸ್ ಅಧಿಕಾರಿಗಳು ಮತ್ತು 36 ಸಿಬ್ಬಂದಿಯನ್ನು ಒಳಗೊಂಡಿದ್ದಾರೆ. ಘಟನೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಘಟನೆ ಬೆಳಕಿಗೆ ಬಂದಿತ್ತು.
ಮೂರು ದಿನಗಳ ಹಿಂದೆ ಒಮ್ಮಿಂದೊಮ್ಮೆಲೇ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ರಾಪ್ತ ಬಾಲಕಿಯರ ಅರೆನಗ್ನ ವಿಡಿಯೋಗಳು ವೈರಲ್ ಆಗಿದ್ದವು. ವಿಡಿಯೋ ಬರುತ್ತಲೇ ಅಚಲ್ಪುರ ಮತ್ತು ಪರತ್ವಾಡದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಆರಂಭದಲ್ಲಿ ಸಂತ್ರಸ್ತರು ದೂರು ನೀಡಲು ಮುಂದೆ ಬರದೇ ಇದ್ದುದರಿಂದ, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ವಾಟ್ಸಪ್ ಮತ್ತು ಸ್ನಾಪ್ ಚಾಟ್ ಮೂಲಕ ಆರೋಪಿಗಳು ಹರೆಯದ ಯುವತಿಯರನ್ನು ಸಂಪರ್ಕಿಸಿ ಪ್ರೀತಿಸುವ ನೆಪದಲ್ಲಿ ಜಾಲ ಬೀಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೆಲವು ಹುಡುಗಿಯರನ್ನು ಮುಂಬೈ ಮತ್ತು ಪುಣೆಗೆ ಕರೆದೊಯ್ಯಲಾಗಿದೆ. ಬಿಜೆಪಿ ಸಂಸದ ಅನಿಲ್ ಬೋಂಡೆ, 180 ಯುವತಿಯರನ್ನು ಬಳಸಿ 350 ವಿಡಿಯೋಗಳನ್ನು ಮಾಡಿದ್ದು ಇದರ ಹಿಂದೆ ದೊಡ್ಡ ಜಾಲವೇ ಇದೆ, ಎಲ್ಲ ಆರೋಪಿಗಳನ್ನು ಬಂಧಿಸದೇ ಇದ್ದರೆ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ತನಿಖೆಗೆ ಎಸ್ಐಟಿ ರಚಿಸಿ ಆದೇಶ ಮಾಡಿತ್ತು.
ಇದೇ ವೇಳೆ, ಆರೋಪಿ ಮೊಹಮ್ಮದ್ ಅಯಾಜ್ ಮನೆ ಅಕ್ರಮ ಎಂಬುದು ಬಯಲಾಗಿದ್ದು ಪುರಸಭೆಯಿಂದ ಅಕ್ರಮ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಆವರಣದಲ್ಲಿ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿದೆ. ಹೀಗಾಗಿ ಪ್ರಕರಣವು ರಾಜಕೀಯ ತಿರುವು ಪಡೆದಿದ್ದು ಆರೋಪಿ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದಲ್ಲಿ ಸಕ್ರಿಯವಾಗಿದ್ದಾನೆ.
ಇದಲ್ಲದೆ, ಮಹಾರಾಷ್ಟ್ರ ಪೊಲೀಸರು ಉಜರ್ ಖಾನ್ ಎಂಬ ಮತ್ತೊಬ್ಬನನ್ನು ಬಂಧನ ಮಾಡಿದ್ದಾರೆ. ಪ್ರಮುಖ ಆರೋಪಿ ಅಯಾನ್ ಮೊಬೈಲ್ ಫೋನ್ನಿಂದ ವೀಡಿಯೊಗಳನ್ನು ಡೌನ್ಲೋಡ್ ಮಾಡಿ ನಂತರ ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am