ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am