ಬ್ರೇಕಿಂಗ್ ನ್ಯೂಸ್
25-04-26 12:55 pm HK News Staffer ಕ್ರೈಂ
ಕಾರ್ಕಳ, ಏಪ್ರಿಲ್ 25: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಸಾವನ್ನಪ್ಪಿ, ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ–ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಗ್ರಾಮದ ‘ನಿಟ್ಟೆ ಫಾರ್ ಎವರ್’ ಹೋಟೆಲ್ ಮುಂಭಾಗ ನಡೆದಿದೆ.
ಕಾರ್ಕಳ ನಿವಾಸಿ ನವೀನ್ ಚಂದ್ರ (45) ಅವರು ತಮ್ಮ ಮಗಳು ಪ್ರೇರಣಾಳನ್ನ ಬೈಕ್ನಲ್ಲಿ ಕೂರಿಸಿಕೊಂಡು ನಿಟ್ಟೆ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದರು. ಈ ವೇಳೆ ಎದುರು ದಿಕ್ಕಿನಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಚಲಿಸಿ, ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ತೀವ್ರವಾಗಿ ಗಾಯಗೊಂಡ ನವೀನ್ ಚಂದ್ರ ಅವರನ್ನು ತಕ್ಷಣ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪ್ರೇರಣಾ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಎಂ.ಸಿ ಆಸ್ಪತ್ರೆ ಗೆ ಸ್ಥಳಾಂತರಿಸಲಾಗಿದೆ.
ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರಿನಲ್ಲಿದ್ದವರು ನಿಟ್ಟೆ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮಿತಿಮೀರಿದ ವೇಗದಲ್ಲಿ ಕಾರು, ಬೈಕ್ ಚಲಾಯಿಸುತ್ತಿದ್ದು ಈ ಹಿಂದೆಯೂ ಅನೇಕ ಬಾರಿ ಅಪಘಾತವನ್ನುಂಟು ಮಾಡಿದ್ದಾರೆ. ನಿಟ್ಟೆ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಬೇಜವಾಬ್ದಾರಿ ಚಾಲನೆ, ಮೋಜು ಮಸ್ತಿಗೆ ಅಮಾಯಕರು ಬಲಿಯಾಗುತ್ತಿದ್ದಾರೆ. ಕಳೆದ ಬಾರಿ ಅತ್ತೂರು ಹಾಗೂ ಬೆಳ್ಳಣ್ ನಲ್ಲಿ ಸಂಭವಿಸಿದ ಅಪಘಾತಕ್ಕೂ ನಿಟ್ಟೆ ಇಂಜಿನೀಯರಿಂಗ್ ವಿದ್ಯಾರ್ಥಿಗಳೇ ಕಾರಣರಾಗಿದ್ದರು. ವಿದ್ಯಾರ್ಥಿಗಳ ವೇಗಕ್ಕೆ ಕಡಿವಾಣ ಅವಶ್ಯ ಎಂದು ಸಾರ್ವಜನಿಕ ವಲಯದಿಂದ ಅಭಿಪ್ರಾಯ ಕೇಳಿಬರುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am