ಬ್ರೇಕಿಂಗ್ ನ್ಯೂಸ್
26-04-26 09:26 pm HK News Staffer ಕ್ರೈಂ
ಉಡುಪಿ, ಏಪ್ರಿಲ್ 26: ನಗರದ ಹೃದಯ ಭಾಗದಲ್ಲಿರುವ ವಾಣಿಜ್ಯ ಕೇಂದ್ರದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡವು ಕ್ಷಣಾರ್ಧದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ. ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡು ವ್ಯಾಪಾರಿಗಳು ಮತ್ತು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ.
ಮೊದಲು ಕಟ್ಟಡದಲ್ಲಿರುವ ಹಾರ್ಡ್ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿದ್ದ ಸುಡುವ ವಸ್ತುಗಳಿಂದಾಗಿ ಅದು ವೇಗವಾಗಿ ಹರಡಿದೆ. ಕೆಲವೇ ಕ್ಷಣಗಳಲ್ಲಿ ಪಕ್ಕದ ಮೊಬೈಲ್ ಅಂಗಡಿಗೂ ಬೆಂಕಿ ವ್ಯಾಪಿಸಿ, ಬೆಲೆಬಾಳುವ ಹ್ಯಾಂಡ್ಸೆಟ್ಗಳು ಹಾಗೂ ಹಾರ್ಡ್ವೇರ್ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿಕೊಂಡು ಕೆಲಕಾಲ ಗೊಂದಲದ ಸ್ಥಿತಿ ನಿರ್ಮಾಣವಾಯಿತು.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ, ಜನನಿಬಿಡ ಪ್ರದೇಶದಲ್ಲೂ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣವನ್ನು ಅಧಿಕಾರಿಗಳು ಇನ್ನೂ ಪರಿಶೀಲಿಸುತ್ತಿದ್ದಾರೆ. ಈ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದ್ದು, ವ್ಯಾಪಾರಿಗಳಿಗೆ ಭಾರೀ ನಷ್ಟ ಉಂಟಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಸ್ಥಳೀಯರಲ್ಲಿ ಕೆಲಕಾಲ ಭೀತಿ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಹಾಗೂ ಅಗ್ನಿಶಾಮಕ ಇಲಾಖೆ ಸ್ಥಳದಲ್ಲಿ ಪರಿಶೀಲನೆ ಮುಂದುವರಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am