ಬ್ರೇಕಿಂಗ್ ನ್ಯೂಸ್
28-04-26 02:36 pm Mangaluru Staffer ಕ್ರೈಂ
ಮಂಗಳೂರು, ಎಪ್ರಿಲ್ 28: ಉಳ್ಳಾಲ ಮುಕ್ಕಚ್ಚೇರಿ ನಿವಾಸಿ, ಬಿಜೆಪಿ ಕಾರ್ಯಕರ್ತನಾಗಿದ್ದ ಜುಬೇರ್ ಎಂಬವರನ್ನು ಕಡಿದು ಕೊಲೆಗೈದ ಪ್ರಕರಣದಲ್ಲಿ ಆರೋಪಿಗಳ ಪಾತ್ರ ಸಾಬೀತಾಗಿದ್ದು, ಪ್ರಧಾನ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಬ್ದುಲ್ ರಹಿಮಾನ್ ಸುಹೇಲ್ (23) ಶಿಕ್ಷೆಗೊಳಗಾದ ಅಪರಾಧಿ. ಇನ್ನುಳಿದ ಆರೋಪಿಗಳಿಗೆ 2022ರಲ್ಲಿ ಶಿಕ್ಷೆ ಪ್ರಕಟವಾಗಿತ್ತು.
2017ರ ಅಕ್ಟೋಬರ್ 4ರಂದು ರಾತ್ರಿ 7.55ಕ್ಕೆ ಮುಕ್ಕಚ್ಚೇರಿ ಮಸೀದಿ ಎದುರು ಜುಬೇರ್ ಎಂಬವರು ಗೆಳೆಯ ಇಲಿಯಾಸ್ ಎಂಬವರ ಜತೆ ನಿಂತು ಮಾತನಾಡುತ್ತಿದ್ದಾಗ ಆರೋಪಿಗಳಾದ ಸುಹೇಲ್, ನಿಜಾಮ್, ಮುಸ್ತಾಫ, ಅಲ್ತಾಫ್, ಆಸಿಫ್, ನಾಸೀರ್ ತಲ್ವಾರ್ ಕತ್ತಿ ಹಿಡಿದು ಬಂದು ಜುಬೇರ್‌ಗೆ ಕಡಿದು ಕೊಲೆ ಮಾಡಿದ್ದರು. ತಡೆಯಲು ಬಂದ ಇಲಿಯಾಸ್ ಅವರಿಗೂ ತಲವಾರಿನಿಂದ ಕಡಿದು ತೀವ್ರ ಗಾಯ ಮಾಡಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2022ರ ಎಪ್ರಿಲ್ 20ರಂದು ಜುಬೇರ್ ಕೊಲೆ ಪ್ರಕರಣವನ್ನು ಸಮಗ್ರ ವಿಚಾರಣೆ ನಡೆಸಿದ್ದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ ಜಕಾತಿ ಅವರು ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದರು. 2ರಿಂದ 4ನೇ ಆರೋಪಿಗಳಾದ ನಿಜಾಮ್, ತಾಜುದ್ದೀನ್, ಮುಸ್ತಾಫ ಎಂಬವರಿಗೆ ಜೀವಾವಧಿ ಶಿಕ್ಷೆ ನೀಡಿದ್ದರೆ, 6ನೇ ಆರೋಪಿ ಅಸಿಫ್ ಮತ್ತು 7ನೇ ಆರೋಪಿ ನಾಸೀರ್ ಖುಲಾಸೆಗೊಂಡಿದ್ದಾಗಿ ತೀರ್ಪು ಪ್ರಕಟಿಸಿದ್ದರು. 5ನೇ ಆರೋಪಿ ಅಲ್ತಾಫ್ ಈ ನಡುವೆ ಮೃತಪಟ್ಟಿದ್ದ.
ತಲೆಮರೆಸಿಕೊಂಡಿದ್ದ ಆರೋಪಿ ಸುಹೇಲ್
ಆದರೆ ಪ್ರಕರಣದಲ್ಲಿ ಜಾಮೀನು ಪಡೆದು ವಿಚಾರಣೆಯ ಅಂತಿಮ ಹಂತದಲ್ಲಿ ಪ್ರಮುಖ ಆರೋಪಿ ಮುಕ್ಕಚ್ಚೇರಿ ನಿವಾಸಿ ಅಬ್ದುಲ್ ರಹಿಮಾನ್ ಸುಹೇಲ್ ತಲೆಮರೆಸಿಕೊಂಡಿದ್ದ. ನಾಲ್ಕು ತಿಂಗಳ ಹಿಂದೆ ಆತನನ್ನು ಬಂಧಿಸಿದ್ದು ಇದೀಗ ವಿಚಾರಣೆ ನಡೆಸಿದೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸುನೀತಾ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಮೋಹನ್ ವಾದ ಮಂಡಿಸಿರುತ್ತಾರೆ. ಪ್ರಕರಣದಲ್ಲಿ ಉಳ್ಳಾಲರ ಆಗಿನ ಇನ್ಸ್ ಪೆಕ್ಟರ್ ಕೆ.ಆರ್. ಗೋಪಿಕೃಷ್ಣ ತನಿಖಾಧಿಕಾರಿಯಾಗಿ ಆರೋಪ ಪಟ್ಟಿ ಸಲ್ಲಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am