ಬ್ರೇಕಿಂಗ್ ನ್ಯೂಸ್
29-04-26 03:50 pm HK News Staffer ಕ್ರೈಂ
ಉಡುಪಿ, ಏಪ್ರಿಲ್.29: ತ್ರಾಸಿ ಬೀಚ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೇಸಿಗೆ ರಜೆಯಲ್ಲಿ ಕರಾವಳಿ ಸುತ್ತಾಟಕ್ಕೆ ಬಂದ ವಿದ್ಯಾರ್ಥಿಗಳ ಸಂತಸದ ಪ್ರವಾಸ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದೆ.
ಶಿವಮೊಗ್ಗದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿದ್ದರು. ಮುರುಡೇಶ್ವರ ದರ್ಶನ ಮುಗಿಸಿ ಉಡುಪಿ ಕಡೆ ಪ್ರಯಾಣಿಸುತ್ತಿದ್ದ ವೇಳೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಬಸ್ಸಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್ಸಿನಲ್ಲಿ ಒಟ್ಟು 47 ಮಂದಿ ಇದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತಿ ವೇಗ ಮತ್ತು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am