ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am