ಬ್ರೇಕಿಂಗ್ ನ್ಯೂಸ್
30-04-26 04:30 pm HK News Staffer ಕ್ರೈಂ
ನವದೆಹಲಿ, ಎಪ್ರಿಲ್ 30: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಎಪ್ರಿಲ್ 29ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಹೇಳಿದ್ದಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ಕುಸುಮಾವತಿ ಗೌಡ ಪರ ವಾದ ಮಂಡಿಸಿದ ವಕೀಲರು ಪ್ರಕರಣದಲ್ಲಿ ಹಲವು ಸಾಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ರಾಜ್ಯ ಸರ್ಕಾರ ಮತ್ತು ಸಿಬಿಐ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಗಂಭೀರ ಪ್ರಕರಣದಲ್ಲಿ ಇಷ್ಟೊಂದು ನಿರಾಸಕ್ತಿ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಮತ್ತು ಸಿಬಿಐ ವಕೀಲರು ಜುಲೈ 14ರೊಳಗೆ ಲಿಖಿತ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರ ಮತ್ತು ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಇದೇ ವೇಳೆ, ಸೌಜನ್ಯಾ ಪರ ವಕೀಲರು ಪ್ರಕರಣದ ಪ್ರಮುಖ ಸಾಕ್ಷ್ಯಗಳು ಮತ್ತು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟಿನ ಗಮನಕ್ಕೆ ತಂದಿದ್ದಾರೆ.
ಇದರಂತೆ, ಪ್ರಕರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದಲೇ ರಕ್ಷಣೆ ನೀಡಬೇಕು, ರಾಜ್ಯ ಸರ್ಕಾರ ಮತ್ತು ಸಿಬಿಐ ಎರಡು ವಾರಗಳಲ್ಲಿ ಲಿಖಿತ ರೂಪದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಮರು ತನಿಖೆಯನ್ನು ಯಾವ ಸಂಸ್ಥೆಯಿಂದ ನಡೆಸಬಹುದು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ, ಶೇಖರ ದೇವಸ್, ಸಂಜಯ್ ನೂಲವಿ, ಆಶುತೋಷ್ ದುಬೇ ಹಾಜರಿದ್ದರು. ಸಂತೋಷ್ ರಾವ್ ಪರವಾಗಿ ಹಿರಿಯ ವಕೀಲ ಗುರುರಾಜ್ ವಾದ ಮಂಡಿಸಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm