ಬ್ರೇಕಿಂಗ್ ನ್ಯೂಸ್
09-05-26 09:54 am HK News Staffer ಕ್ರೈಂ
ಪುತ್ತೂರು, ಮೇ 09 : ಬೇಸಿಗೆ ರಜೆಯ ಸಂಭ್ರಮದಲ್ಲಿ ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ.
ಮೃತರನ್ನು ಅರ್ಪಿತಾ (15) ಹಾಗೂ ಸುನೀತಾ (21) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ. ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ನೇಹಿತರೊಂದಿಗೆ ತೆರಳಿದ್ದ ವೇಳೆ ದುರಂತ
ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಸ್ನೇಹಿತರ ಬಳಗ ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆ ತೆರಳಿತ್ತು. ಸಂಜೆ ಸುಮಾರು 4:30ರ ವೇಳೆಗೆ ಎಲ್ಲರೂ ನದಿಯಲ್ಲಿ ಈಜಾಡುತ್ತಿದ್ದಾಗ, ಅರ್ಪಿತಾ ಮತ್ತು ಸುನೀತಾ ನೀರಿನ ಆಳಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ಸ್ಥಳೀಯರಿಂದ ಶೋಧ ಕಾರ್ಯ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿ ಜಾರ್ಜ್ ಎಂಬವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಕುಟ್ರುಪ್ಪಾಡಿ ಭಾಗದ ನದಿ ಪ್ರದೇಶ ಈ ಹಿಂದೆಯೂ ಅಪಾಯಕಾರಿಯಾಗಿತ್ತು ಎನ್ನಲಾಗಿದೆ. ಇದೇ ಸ್ಥಳದಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗ್ರಾಮಸ್ಥರ ನೆನಪಿನಲ್ಲಿ ಇನ್ನೂ ಹಸಿರಾಗಿರುವಾಗಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ.
ಕನಸುಗಳೇ ನೀರಿನಲ್ಲಿ ಕರಗಿ ಹೋಯ್ತು
ರಜೆಯ ದಿನಗಳನ್ನು ಖುಷಿಯಿಂದ ಕಳೆಯಲು ತೆರಳಿದ್ದ ಈ ಬಾಲಕಿಯರು, ಮುಂದಿನ ಭವಿಷ್ಯದ ಅನೇಕ ಕನಸುಗಳನ್ನು ಹೊತ್ತಿದ್ದರು. ಆದರೆ ಕ್ಷಣ ಮಾತ್ರದ ಅಜಾಗರೂಕತೆ ಅವರ ಬದುಕನ್ನೇ ಕಸಿದುಕೊಂಡಿದೆ. ನಗುನಗುತ್ತಾ ಹೊರಟಿದ್ದ ಮಕ್ಕಳು ಶವವಾಗಿ ಮನೆಗೆ ಮರಳಿರುವ ದೃಶ್ಯ ಪೋಷಕರ ಆಕ್ರಂದನಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಆವರಿಸಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm