ಬ್ರೇಕಿಂಗ್ ನ್ಯೂಸ್
05-01-21 04:10 pm Mangalore Correspondent ಕ್ರೈಂ
ಸುಳ್ಯ, ಜ.5 : ಶಾಲಾ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ಯುವಕರಿಬ್ಬರು ಮುಖಕ್ಕೆ ಸ್ಪ್ರೇ ಸಿಂಪಡಿಸಿ ಪ್ರಜ್ಞೆ ತಪ್ಪಿಸಿರುವ ಘಟನೆ ತಾಲೂಕಿನ ಕುಕ್ಕುಜಡ್ಕ ಎಂಬಲ್ಲಿ ನಡೆದಿದೆ.
ಕುಕ್ಕಜಡ್ಕ ಬಳಿಯ ಆನೆಕಾರ್ ಎಂಬಲ್ಲಿ ಘಟನೆ ನಡೆದಿದ್ದು ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಆಟೋದಲ್ಲಿ ತೆರಳುತ್ತಿದ್ದವರು ರಕ್ಷಿಸಿ, ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿ ರಸ್ತೆಯಲ್ಲಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದಳು. ದುಷ್ಕರ್ಮಿಗಳು ಸ್ಪ್ರೇ ಸಿಂಪಡಿಸಿ ಯಾವ ಉದ್ದೇಶ ಇಟ್ಟುಕೊಂಡಿದ್ದರು, ಅಪಹರಿಸಲು ಪ್ಲಾನ್ ಹಾಕಿದ್ದರೇ ಎನ್ನುವುದು ಗೊತ್ತಾಗಿಲ್ಲ. ವಾಹನಗಳು ಓಡಾಡುವ ರಸ್ತೆಯಾಗಿದ್ದರಿಂದ ಯಾವುದೋ ವಾಹನ ಬಂದ ಶಬ್ದ ಕೇಳಿ ಬೈಕಿನಲ್ಲಿ ಪರಾರಿಯಾಗಿರಬೇಕು ಎನ್ನಲಾಗುತ್ತಿದೆ.

ಸುಳ್ಯದ ಆಸ್ಪತ್ರೆಯಲ್ಲಿ ಬಾಲಕಿ ಚೇತರಿಸಿಕೊಂಡಿದ್ದು ಬೈಕಿನಲ್ಲಿ ಬಂದ ಆಗಂತುಕರು ಈ ಕೃತ್ಯ ಮಾಡಿದ್ದಾಗಿ ತಿಳಿಸಿದ್ದಾಳೆ. ಸುಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬಾಲಕಿ, ಕುಕ್ಕುಜಡ್ಕದ ಶಾಲೆಗೆಂದು ಬರುತ್ತಿದ್ದಳು. ವಿದ್ಯಾಗಮ ಯೋಜನೆಯಡಿ ಮಧ್ಯಾಹ್ನ ನಂತರ ಶಾಲೆ ಇರುವುದರಿಂದ ಬಾಲಕಿ ಒಬ್ಬಳೇ ನಡೆದುಕೊಂಡು ಬರುತ್ತಿದ್ದಳು. ಈ ವೇಳೆ, ಬಾಲಕಿಯ ಮುಖಕ್ಕೆ ಯಾವುದೋ ರಾಸಾಯನಿಕ ಸಿಂಪಡಿಸಲಾಗಿದೆ.
Bike-Brown Men spray Chemical on a girl who was walking in the streets of Sullia in Mangalore. The girl is said to be unconscious and has been admitted to a private hospital.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am