ಬ್ರೇಕಿಂಗ್ ನ್ಯೂಸ್
13-05-26 06:36 pm HK News Staffer ಕ್ರೈಂ
ಹಾಸನ, ಮೇ 13: ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಭುಜ ತಾಗಿದ ವಿಚಾರಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹಾಸನ ನಗರದ ಕುವೆಂಪುನಗರದಲ್ಲಿರುವ ಎಂ.ಜೆ ಫಿಟ್ನೆಸ್ ಸ್ಟುಡಿಯೋದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಈ ಹಲ್ಲೆ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೀರ್ತನ್ ಎಂದು ಗುರುತಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಯನ್ನು ವರುಣ್ ಎಂದು ಹೇಳಲಾಗಿದೆ. ಇಬ್ಬರೂ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ, ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳುವಾಗ ಕೀರ್ತನ್ ಅವರ ಭುಜ ವರುಣ್ ಭುಜಕ್ಕೆ ತಾಗಿತ್ತು ಎನ್ನಲಾಗಿದೆ. ಈ ಸಣ್ಣ ವಿಚಾರವೇ ದೊಡ್ಡ ಗಲಾಟೆಗೆ ಕಾರಣವಾಗಿದೆ.
ಭುಜ ತಾಗಿದ್ದಕ್ಕೆ ಕೋಪಗೊಂಡ ವರುಣ್, ಕೀರ್ತನ್ನನ್ನು ಕರೆದು ಅವಾಜ್ ಹಾಕಿದ ಬಳಿಕ ಏಕಾಏಕಿ ತಲೆ ಭಾಗಕ್ಕೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯ ತೀವ್ರತೆಗೆ ಕೀರ್ತನ್ ಅವರ ತಲೆಬರುಡೆಗೆ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ಮಾಹಿತಿ ಪ್ರಕಾರ, ಕೀರ್ತನ್ ಅವರ ತಲೆಬುರುಡೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಕೋಮಾಗೆ ಜಾರಿದ್ದಾರೆ ಎನ್ನಲಾಗಿದೆ. ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೋಪ ಮತ್ತು ಅಹಂಕಾರ ಕೆಲವೇ ಕ್ಷಣಗಳಲ್ಲಿ ಜೀವ ಹಾನಿಗೂ ಕಾರಣವಾಗಬಹುದು. ಕ್ಷುಲ್ಲಕ ವಿಚಾರಗಳನ್ನು ಮಾತಿನ ಮೂಲಕ ಬಗೆಹರಿಸಿಕೊಳ್ಳುವ ಬದಲು ಹಿಂಸೆಗೆ ಮೊರೆಹೋದರೆ ಅದರ ಪರಿಣಾಮ ಭೀಕರವಾಗಿರುತ್ತದೆ. ಯುವಕರು ಕೋಪ ನಿಯಂತ್ರಣ, ಸಹನೆ ಮತ್ತು ಪರಸ್ಪರ ಗೌರವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.
Shocking gym assault in Hassan, Karnataka: At M.J. Fitness, a minor shoulder bump led to Varun kicking Kirthan in the head, causing skull fracture & coma. Victim in ICU, police investigating. pic.twitter.com/pUu6w1rvET
— Ghar Ke Kalesh (@gharkekalesh) May 13, 2026
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am