ಬ್ರೇಕಿಂಗ್ ನ್ಯೂಸ್
16-05-26 10:24 pm HK News Desk ಕ್ರೈಂ
ಬೆಳಗಾವಿ, ಮೇ 16: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ ಗಿಟ್ಟಿಸಿಕೊಂಡು ಶಿವಂ ಅಸೋಸಿಯೇಟ್ಸ್ ಹೆಸರಲ್ಲಿ ಸಾವಿರಾರು ಜನರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪದಲ್ಲಿ ಉದ್ಯಮಿ ಶಿವಾನಂದ ನೀಲಣ್ಣವರ್ ಕಚೇರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗಾವಿಯ ಶಿವಬಸವ ನಗರದಲ್ಲಿರುವ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಗಳಲ್ಲಿದ್ದ ಹಣಕಾಸು ವ್ಯವಹಾರಗಳ ದಾಖಲೆಗಳು, ಹೂಡಿಕೆ ವಿವರಗಳು, ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣದ ಮಾಹಿತಿ ಹಾಗೂ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಎರಡು ದಿನಗಳಿಂದ ಬೆಳಗಾವಿ ಎಸಿ ನೇತೃತ್ವದ ತಂಡ ತನಿಖೆ ನಡೆಸಿದೆ. 45 ಸಾವಿರ ಜನರಿಂದ ಅಂದಾಜು 4600 ಕೋಟಿ ಹೂಡಿಕೆ ಮಾಡಿಸಿದ್ದಾರೆ ಎನ್ನಲಾಗುತ್ತಿದ್ದು, ನಿಯಮಗಳನ್ನು ಗಾಳಿಗೆ ತೂರಿದ್ದಾರೆಂದು ಡಿಸಿ ಮೊಹಮ್ಮದ್ ರೋಷನ್ ತನಿಖೆಗೆ ಆದೇಶ ಮಾಡಿದ್ದರು. ಇದರಂತೆ ಕಂದಾಯ ಮತ್ತು ಸಹಕಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಖಲೆ ಪರಿಶೀಲನೆ ನಡೆಸಿದ್ದರು. ನಾಲ್ಕು ಬ್ಯಾಂಕ್ ಅಕೌಂಟ್, ಎರಡು ಕಚೇರಿ, ಒಂದು ಅಪಾರ್ಟ್ಮೆಂಟ್ ನಿವಾಸ, ಮತ್ತೊಂದು ಮನೆಯಲ್ಲಿ ಪರಿಶೀಲನೆ ಮಾಡಲಾಗಿದೆ.
ಇತ್ತೀಚೆಗೆ ಶಿವಾನಂದ ನೀಲಣ್ಣನವರ್ ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ನಮ್ಮ ಬಳಿ 15 ಸಾವಿರ ಬಂದೂಕುಗಳಿವೆ, ದೊಡ್ಡ ಸಾಮ್ರಾಜ್ಯ ಕಟ್ಟಿದ್ದೇನೆ, ನಾನು ಯಾರಿಗೂ ಹೆದರಲ್ಲ, ನಿಮ್ಮನ್ನು ಗಂಡಸರನ್ನಾಗಿ ಮಾಡಲು ಬಂದಿದ್ದೇನೆ ಎಂಬ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದವು. ಇದೇ ಭಾಷಣದಲ್ಲಿ 2028ರಲ್ಲಿ ಒಂದೇ ಸಲ 224 ಸ್ಥಾನ ಗೆದ್ದು ಮುಖ್ಯಮಂತ್ರಿ ಆಗುತ್ತೇನೆ ಎಂಬ ಹೇಳಿಕೆಯೂ ವ್ಯಾಪಕ ಗಮನ ಸೆಳೆದಿತ್ತು.
ನೀಲಣ್ಣನವರ್ ನೇತೃತ್ವದಲ್ಲಿ ಇದೇ ಮೇ 17ರಂದು ಸ್ವಚ್ಛ ಬೆಳಗಾವಿ ಸಂಭ್ರಮ ಹೆಸರಿನಲ್ಲಿ 25 ಸಾವಿರ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಲಾಗಿತ್ತು. ಸರ್ದಾರ್ಸ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿದ್ದು, ಭಾರೀ ಪ್ರಮಾಣದಲ್ಲಿ ಬ್ಯಾನರ್ ಹಾಗೂ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು. ಆದರೆ, ಅಗತ್ಯ ಭದ್ರತಾ ಕ್ರಮಗಳು ಹಾಗೂ ಕಾನೂನು ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.
ಶಿವಂ ಅಸೋಸಿಯೇಟ್ ಸಂಸ್ಥೆ ಹೆಸರಿನಲ್ಲಿ ಶಿವಾನಂದ ನೀಲಣ್ಣವರ್ ಹೆಚ್ಚಿನ ಬಡ್ಡಿ ದರ ಕೊಡುವುದಾಗಿ ನಂಬಿಸಿ ಜನರಿಂದ ಭಾರೀ ಪ್ರಮಾಣದಲ್ಲಿ ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿದ್ದ. ಮಾಜಿ ಸೈನಿಕರು, ಯುವಕರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿದರ ನೀಡುವುದಾಗಿ ಭರವಸೆ ನೀಡಿ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದವು. ಸಾವಿರಾರು ಕೋಟಿ ರುಪಾಯಿ ಹೂಡಿಕೆ ಸಂಗ್ರಹವಾಗಿದ್ದು, ಹಣದ ಬಳಕೆ ಹಾಗೂ ವ್ಯವಹಾರಗಳ ಕುರಿತು ಈಗ ತನಿಖೆ ಆರಂಭವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am