ಬ್ರೇಕಿಂಗ್ ನ್ಯೂಸ್
22-05-26 07:18 pm HK News Staffer ಕ್ರೈಂ
ಬೆಳಗಾವಿ, ಮೇ 22: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಮೃತ ವೈದ್ಯ.
ಮಂಡೋಳಿ ರಸ್ತೆಯ ಗೋಡ್ಸೆವಾಡಿಯಲ್ಲಿರುವ ತಮ್ಮ ನಿವಾಸದ ಬಾಲ್ಕನಿಯಲ್ಲಿ ಡಾ. ಭಟ್ಕಳ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾದ ಡಾ. ದಿನೇಶ್ ಭಟ್ಕಳ ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಡಾ ಭಟ್ಕಳ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕಳೆದ ನಾಲ್ಕು ತಿಂಗಳ ಹಿಂದಷ್ಟೇ ದಿನೇಶ್ ಅವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿ ಮನೆ ಮಾಡಿಕೊಂಡು ಕುಟುಂಬಸ್ಥರೊಂದಿಗೆ ವಾಸವಿದ್ದರು.
ಶ್ವಾಸಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಸಹಿಸಲಾಗದ ನೋವನ್ನು ಅನುಭವಿಸುತ್ತಿದ್ದರು ಎನ್ನಲಾಗಿದೆ. ತಮಗಾಗುತ್ತಿರುವ ನೋವಿನ ಕುರಿತು ಆಗಾಗ ತಮ್ಮ ಸ್ನೇಹಿತರೊಡನೆ ಹಂಚಿಕೊಳ್ಳುತ್ತಿದ್ದರು. ಇಂದೂ ಸಹ ಬೆಳಗ್ಗೆ ಎದ್ದ ತಕ್ಷಣ ದಿನೇಶ್ ಅವರಿಗೆ ಎದೆಯಲ್ಲಿ ಸಹಿಸಲಾಗದ ನೋವು ಕಾಣಿಸಿಕೊಂಡಿದೆ. ಹೀಗಾಗಿ, ಅವರು ತಮ್ಮ ಮನೆಯಲ್ಲಿದ್ದ ರಿವಾಲ್ವಾರ್ ತೆಗೆದುಕೊಂಡು ಮನೆಯ ಗ್ಯಾಲರಿ ಬಳಿ ಹೋಗಿ ಅಲ್ಲಿಯೇ ತಲೆಗೆ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ.
ವೈದ್ಯ ದಿನೇಶ್ ಆತ್ಮಹತ್ಯೆಗೆ ಶರಣಾಗುವ ಮುನ್ನ ತಮ್ಮ ಹಿತೈಷಿಗಳು ಹಾಗೂ ಮಾರ್ಗದರ್ಶಕರಿಗೆ ವಾಟ್ಸಪ್ ಸಂದೇಶ ರವಾನಿಸಿದ್ದಾರೆ. ಅದರಲ್ಲಿ ಕೆಎಲ್ಇ ಮಾಜಿ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆಯವರಿಗೂ ಸಹ ವಾಟ್ಸಪ್ ಸಂದೇಶ ಕಳಿಸಿದ್ದಾರೆ.
‘ನನಗೆ ನೀವು ಇಷ್ಟು ವರ್ಷ ಸಹಾಯ ಮಾಡಿದ್ದೀರಿ. ಆದರೆ, ನನಗೆ ತೀವ್ರವಾದ ಎದೆ ನೋವಿದೆ. ನಾನು ನೋವಿನಿಂದ ಬೇಸತ್ತು ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ದಯವಿಟ್ಟು ನನ್ನ ಕುಟುಂಬಕ್ಕೆ ಸಹಾಯ ಮಾಡಿ. ನಗರ ಪೊಲೀಸ್ ಆಯುಕ್ತರಿಗೂ ಮಾಹಿತಿ ನೀಡಿ’ ಎಂದು ಸಂದೇಶ ಕಳುಹಿಸಿದ್ದಾರೆ.
ಡಾ. ದಿನೇಶ್ ಅವರ ಆತ್ಮಹತ್ಯೆಯ ಸುದ್ದಿ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ತಿಳಿಯಬೇಕಿದೆ.
ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಮಾನಸಿಕ ಒತ್ತಡ, ಖಿನ್ನತೆ ಅಥವಾ ನಿರಾಶೆ ಎದುರಾದಾಗ ಒಂಟಿಯಾಗಿರಬೇಡಿ. ಕುಟುಂಬಸ್ಥರು, ಸ್ನೇಹಿತರು ಅಥವಾ ತಜ್ಞರೊಂದಿಗೆ ಮಾತನಾಡುವುದು ಬಹಳ ಮುಖ್ಯ. ಭಾವನಾತ್ಮಕ ಬೆಂಬಲ ಅಗತ್ಯವಿದ್ದರೆ ಸಹಾಯವಾಣಿಗಳನ್ನು ಸಂಪರ್ಕಿಸಬಹುದು.
ಸ್ನೇಹ ಫೌಂಡೇಶನ್: 044-24640050 (24x7)
ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಸಹಾಯವಾಣಿ: 9152987821 (ಬೆಳಗ್ಗೆ 8 ರಿಂದ ರಾತ್ರಿ 10ರವರೆಗೆ)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am