ಬ್ರೇಕಿಂಗ್ ನ್ಯೂಸ್
24-05-26 02:01 pm HK News Staffer ಕ್ರೈಂ
ಬೆಂಗಳೂರು, ಮೇ 24: ಪೊಲೀಸ್ ಕ್ವಾರ್ಟಸ್ನಲ್ಲೇ ನೇಣು ಬಿಗಿದು ಕಾನ್ಸ್ಪೇಬಲ್ ಒಬ್ಬರ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.
ಲಕ್ಷ್ಮೀ ಪ್ರಿಯಾ (26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್ಎಎಲ್ ಠಾಣೆಯ ಕಾನ್ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಾಗಿದೆ.
ಮೈಸೂರು ಮೂಲದ ಲಕ್ಷ್ಮೀ ಪ್ರಿಯಾಗೆ 2023ರಲ್ಲಿ ಕಾನ್ಸ್ಟೇಬಲ್ ರಾಜೇಶ್ ಜೊತೆ ಮದುವೆಯಾಗಿತ್ತು. ಈ ವೇಳೆ 350 ಗ್ರಾಂ ಚಿನ್ನ, 1 ಕೆ.ಜಿ. ಬೆಳ್ಳಿ ಹಾಗೂ ಗೃಹ ಬಳಕೆ ವಸ್ತುಗಳನ್ನು ನೀಡಲಾಗಿತ್ತು. ದಂಪತಿಗೆ 8 ತಿಂಗಳ ಹೆಣ್ಣು ಮಗುವಿದೆ. ಮದುವೆಯಾದ ಕೆಲ ತಿಂಗಳ ಬಳಿಕ ವರದಕ್ಷಿಣೆ ಹಣಕ್ಕಾಗಿ ಪತಿ ಪೀಡಿಸುತ್ತಿದ್ದ. ಬಾಣಂತನಕ್ಕಾಗಿ ತವರು ಮನೆಗೆ ಬಂದಾಗಲೂ ಮಾನಸಿಕ ಕಿರುಕುಳ ನೀಡಿದ್ದ.
ಇದಲ್ಲದರ, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದು ಇದನ್ನು ಮಗಳು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡಲಾರಂಭಿಸಿದ್ದ. ಮೇ 22ರಂದು ತನ್ನ ಮಗಳು ವಾಟ್ಸಾಪ್ನಲ್ಲಿ ಮೊಬೈಲ್ ಪಾಸ್ವರ್ಡ್ ಕಳುಹಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ರಾಜೇಶ್ ಹಾಗೂ ಆತನ ಮನೆಯವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತಳ ತಂದೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ರಾಜೇಶ್ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am