ಬ್ರೇಕಿಂಗ್ ನ್ಯೂಸ್
25-05-26 02:23 pm HK News Staffer ಕ್ರೈಂ
ಭಟ್ಕಳ, ಮೇ 25: ಭಟ್ಕಳ ತಾಲೂಕಿನ ಮುರಿನಕಟ್ಟೆ ಎಂಬಲ್ಲಿ ದೇವರಕಟ್ಟೆಯೊಂದರ ಮರುನಿರ್ಮಾಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಮುರಿನಕಟ್ಟೆಯಲ್ಲಿ ಕಳೆದ ಹಲವು ವರ್ಷಗಳಿಂದ ಧಾರ್ಮಿಕ ನಂಬಿಕೆಯುಳ್ಳ ದೇವರಕಟ್ಟೆಯೊಂದು ಅಸ್ತಿತ್ವದಲ್ಲಿತ್ತು. ಕಳೆದ ಕೆಲವು ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ ಈ ಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ಸ್ಥಳೀಯರು ಇದೇ ಸ್ಥಳದ ಸಮೀಪದಲ್ಲಿ ಮತ್ತೆ ದೇವರಕಟ್ಟೆ ನಿರ್ಮಿಸಿದ್ದರು.
ದೇವರಕಟ್ಟೆಗೆ ಮತ್ತೊಂದು ಕೋಮಿನವರ ಆಕ್ಷೇಪ:
ಸ್ಥಳೀಯರು ನಿರ್ಮಿಸಿದ್ದ ಹೊಸ ಕಟ್ಟೆಗೆ ಮತ್ತೊಂದು ಕೋಮಿನವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕಟ್ಟೆಯನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಒಂದು ಗುಂಪು ಪ್ರತಿಭಟನೆ ನಡೆಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿದರು.
ಇದೀಗ ಮುರಿನಕಟ್ಟೆ ಪ್ರದೇಶದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಮತ್ತು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಅಧಿಕಾರಿಗಳು ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಮಾಡುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am