ಬ್ರೇಕಿಂಗ್ ನ್ಯೂಸ್
27-05-26 12:42 pm HK News Staffer ಕ್ರೈಂ
ಬೆಂಗಳೂರು, ಮೇ 27: ಮುಂಬೈನಲ್ಲಿ ರೇಡಿಯೊ ಜಾಕಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಗರದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮುಂಬೈ ಮೂಲದ ಮನೀಷಾ ಪ್ರಸಾದ್ (48) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಘಟನೆಗೆ ಸಂಬಂಧಿಸಿ ಆಕೆಯ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೀಷಾ ಪ್ರಸಾದ್ ಅವರು ಮುಂಬೈನಲ್ಲಿ ರೇಡಿಯೊ ಜಾಕಿಯಾಗಿದ್ದರು. ಕೌಟುಂಬಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ 2024 ರಲ್ಲಿ ಅವರು ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ವಿಚ್ಛೇದನ ಬಳಿಕ ಮುಂಬೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಿಮಾಚಲ ಪ್ರದೇಶ ಮೂಲದ ಹರ್ಷವರ್ಧನ್ ಸಿಂಗ್ ಬನ್ಸಾಲ್ ಎಂಬಾತನ ಪರಿಚಯವಾಗಿ, ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ನಂತರ ಇಬ್ಬರೂ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿ ಇದ್ದರು ಎನ್ನಲಾಗಿದೆ.
ಸಹ ಜೀವನ ನಡೆಸುತ್ತಿದ್ದ ವೇಳೆ ಪ್ರಿಯಕರ ಹರ್ಷವರ್ಧನ್ ಸಿಂಗ್, ಮನೀಷಾ ಅವರಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಘಾಸಿಗೊಂಡ ಮನೀಷಾ ಆತನಿಂದ ದೂರವಿರಲು ನಿರ್ಧರಿಸಿ, ಕಳೆದ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿಗೆ ಬಂದಿದ್ದರು. ಮಾನ್ಯತಾ ಟೆಕ್ ಪಾರ್ಕಿನ ಅಪಾರ್ಟ್‌ಮೆಂಟ್‌ನಲ್ಲಿ ಹೊಸದಾಗಿ ಫ್ಲ್ಯಾಟ್ ಖರೀದಿಸಿ, ಒಂಟಿಯಾಗಿ ವಾಸಿಸುತ್ತಿದ್ದರು.
ಕಳೆದ ಕೆಲವು ದಿನಗಳಿಂದ ಮನೀಷಾ ಸಂಬಂಧಿಕರ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಸಂಬಂಧಿಕರು ನಿನ್ನೆ ಬೆಂಗಳೂರಿನ ಫ್ಲ್ಯಾಟ್‌ಗೆ ಬಂದು ಪರಿಶೀಲಿಸಿದಾಗ ಮನೀಷಾ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಮೃತಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಮೂರು ಪುಟಗಳ ಡೆತ್‌ನೋಟ್
ಆತ್ಮಹತ್ಯೆಗೂ ಮುನ್ನ ಮನೀಷಾ ಅವರು ಮೂರು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ, “ನನ್ನ ಸಾವಿಗೆ ಹಿಮಾಚಲ ಪ್ರದೇಶದ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಕಿರುಕುಳವೇ ನೇರ ಕಾರಣ” ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಮೃತಹಳ್ಳಿ ಪೊಲೀಸರು ಮರಣಪತ್ರ ಹಾಗೂ ಮನೀಷಾ ಅವರ ಮೊಬೈಲ್ ಫೋನ್ ವಶಪಡಿಸಿದ್ದಾರೆ. ಆರೋಪಿ ಹರ್ಷವರ್ಧನ್ ಸಿಂಗ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಕೈಗೊಂಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm