ಬ್ರೇಕಿಂಗ್ ನ್ಯೂಸ್
27-05-26 07:56 pm HK News Staffer ಕ್ರೈಂ
ಮಂಗಳೂರು, ಮೇ 27: ಇತ್ತೀಚೆಗೆ ನಗರದ ಕೋಡಿಕಲ್ ಬಳಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ತಂಡ ಹುಡಿಕಿ ಬಂಧಿಸಿದ್ದಾರೆ.
ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸಚಿನ್ ಕೆ ಆರ್ (24) ಮತ್ತು ನೆಲ್ಯಾಡಿಯ ಚಂದನ್ (24) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಉಪಯೋಗಿಸಿರುವ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 24 ರಂದು ಮಧ್ಯರಾತ್ರಿ 02:10 ಗಂಟೆಯ ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟಿಕಲ್ ಸ್ಕೂಟರ್ ನಲ್ಲಿ ಬಂದ ಆರೋಪಿಗಳಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟ್ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ.
ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕೇರಳದ ಕಾಂಗಾಡ್ ಪ್ರದೇಶದಲ್ಲಿ ಮೇ 26ರಂದು ಅರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ನಗರದಲ್ಲಿ ಉದ್ಯೋಗದಲ್ಲಿದ್ದ ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮಧ್ಯರಾತ್ರಿಯ ವೇಳೆ ಸುತ್ತಾಡುತ್ತಿದ್ದಾಗ ಬೀಟ್ ಪೊಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೊಲೀಸರ ಮೇಲೆ ಸಿಮೆಂಟ್ ಸೀಟಿನ ತುಂಡಿನಿಂದ ಹಲ್ಲೆ ನಡೆಸಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm