ಬ್ರೇಕಿಂಗ್ ನ್ಯೂಸ್
29-05-26 03:05 pm HK News Staffer ಕ್ರೈಂ
ಚಿತ್ರದುರ್ಗ, ಮೇ 29: ಚಲಿಸುತ್ತಿದ್ದ ಕಾರಿನ ಟೈಯರ್ ಏಕಾಏಕಿ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಅಪಘಾತ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಮೃತರನ್ನು ಚಳ್ಳಕೆರೆ ಮೂಲದ ಛಾಯಾಗ್ರಾಹಕರಾದ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ ಹಾಗೂ ಪ್ರಮೋದ್ ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಚಳ್ಳಕೆರೆ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿಯಾಗಿದ್ದರು.
ಮೂಲಗಳ ಪ್ರಕಾರ, ಐವರು ಕಾರಿನಲ್ಲಿ ಬಳ್ಳಾರಿಯಿಂದ ಚಳ್ಳಕೆರೆಗೆ ಮರಳುತ್ತಿದ್ದರು. ಈ ವೇಳೆ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡಿದ್ದು, ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಚಾಲಕ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಒಂದೇ ಅಪಘಾತದಲ್ಲಿ ಐವರು ಜೀವ ಕಳೆದುಕೊಂಡಿರುವುದು ಚಳ್ಳಕೆರೆ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am