ಬ್ರೇಕಿಂಗ್ ನ್ಯೂಸ್
31-05-26 08:25 pm HK News Staffer ಕ್ರೈಂ
ಹಾಸನ, ಮೇ 31: ನಗರದ ಖಾಸಗಿ ಲಾಡ್ಜ್‌ನಲ್ಲಿ ಉಪ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವುದು ತನಿಖೆಗೆ ಮಹತ್ವದ ಸುಳಿವಾಗಿದೆ.
ಮೃತರನ್ನು ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮಯ್ಯ (52) ಎಂದು ಗುರುತಿಸಲಾಗಿದೆ. ಅವರು ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಕುಟುಂಬದೊಂದಿಗೆ ಹಾಸನದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಸಾಲಿಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನಾ ಸ್ಥಳದಲ್ಲಿ ನಾಲ್ಕು ಪುಟಗಳ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿರುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆ ಬಳಿಕವೇ ಸ್ಪಷ್ಟವಾಗಲಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಬಡಾವಣೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm